ಜಿಲ್ಲಾ ವಿಜ್ಞಾನ ಕೇಂದ್ರದ 37ನೇ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಕಲಬುರಗಿ,ಜ.5:ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದ 37ನೇ ವಾರ್ಷಿಕೋತ್ಸವದ ಅಂಗವಾಗಿ ಇದೇ ಜನವರಿ 6 ರಿಂದ 8 ರವರೆಗೆ ವಿದ್ಯಾರ್ಥಿಗಳಿಗಾಗಿ ವೆಬಿನಾರ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ವಿಜ್ಞಾನ ಅಧಿಕಾರಿಗಳಾದ ಸಿ.ಎನ್. ಲಕ್ಷ್ಮೀನಾರಾಯಣ ಅವರು ತಿಳಿಸಿದ್ದಾರೆ.
ಜನವರಿ 6ರಂದು ಸಂಜೆ 4.30 ರಿಂದ 6 ಗಂಟೆಯವರೆಗೆ ಜಿಲ್ಲಾ ವಿಜ್ಞಾನ ಕೇಂದ್ರದ 37ನೇ ವಾರ್ಷಿಕೋತ್ಸವ ಉದ್ಘಾಟನೆ ಹಾಗೂ ಇಸ್ರೋ ಸಂಸ್ಥೆಯ ನಿವೃತ್ತ ವಿಜ್ಞಾನಿ ಡಾ. ಬಿ.ಆರ್. ಗುರುಪ್ರಸಾದ್ ಅವರಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳು-ಸಾಧನೆ ಮತ್ತು ಸವಾಲುಗಳ ಕುರಿತು ವೆಬಿನಾರ್ ಆಯೋಜಿಸಲಾಗಿದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು hಣಣಠಿ://meeಣ.googಟe.ಛಿom/ಜಿgಠಿ-qಠಿei-ozರಿ ವೆಬಿನಾರ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.
ಜನವರಿ 7 ರಂದು ಸಂಜೆ 4.30 ರಿಂದ 6 ಗÀಂಟೆಯವರೆಗೆ 7 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ಆನ್‍ಲೈನ್ ಮೂಲಕ ರಸಪ್ರಶ್ನೆ ಕಾರ್ಯಕ್ರಮ ಹಾಗೂ ಜನವರಿ 8 ರಂದು ಸಂಜೆ 4.30 ರಿಂದ 6 ಗಂಟೆಯವರೆಗೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಕುರಿತು 7 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.