ಜಿಲ್ಲಾ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡಿ

ಬೀದರ್: ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಜಿಲ್ಲಾ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.
ಜಿಲ್ಲೆಯ ಭಾಲ್ಕಿ, ಔರಾದ, ಹುಮನಾಬಾದ, ಬಸವಲ್ಯಾಣ ತಾಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗಿದ್ದು, ಬೀದರ ಕೇಂದ್ರ ಸ್ಥಾನದಲ್ಲಿ ಮಾತ್ರ ಜಿಲ್ಲಾ ಸಂಕೀರ್ಣ ಕಟ್ಟಡ ಹಾಗೂ ಮಿನಿ ವಿಧಾನ ಸೌಧ ಎರಡು ಸಹ ನಿರ್ಮಾಣವಾಗಿಲ್ಲ. ತಾವು ಜಿಲ್ಲೆಯ ರಾಜಕೀಯ ಪ್ರತಿನಿಧಿಗಳ ಮನವೋಲಿಸಿ ಜಿಲ್ಲಾ ಕೇಂದ್ರ ಸ್ಥಾನವಾಗಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನನವರ ನೇತೃತ್ವದ ಸರ್ಕಾರದಲ್ಲಿ ಜಿಲ್ಲೆಗೆ ಮಂತ್ರಿ ಸ್ಥಾನ ದೊರೆತ ಸಚಿವರು, ಜಿಲ್ಲೆಯ ನೂತನ ಶಾಸಕರು, ಕೇಂದ್ರ ಸಚಿವರು, ವಿಧಾನ ಪರಿಷತ್ ಸದಸ್ಯರು ಬೀದರ ಜಿಲ್ಲಾ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಇದಕ್ಕೆ ವಿರೋಧ ವ್ಯಕ್ತÀ್ತಪಡಿಸಿದ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಹಾಗೂ ಜನಪ್ರತಿನಿಧಿಗಳ ಮನೆಯ ಮುಂದೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಸೋನಾರೆ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಈಶ್ವರ ಖಂಡ್ರೆ ಅವರು ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಬೀದರ ನಗರದಲ್ಲಿ ಬೀದರ ಜಿಲ್ಲಾ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಸ್ಥಳದ ಚರ್ಚೆ, ಪರಿಶೀಲನೆ ಮಾಡಲಾಗಿತ್ತು. ನಂತರ ಪ್ರಭು ಚೌಹಾಣ ಅವರು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಸ್ಥಳದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದವು. ಆದರೂ ಸ್ಥಳದ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳದಿರುವುದು ಜಿಲ್ಲೆಯ ಜನಪ್ರತಿನಿಧಿಗಳ ನಿರ್ಲಕ್ಷ್ಯತನಕ್ಕೆ ಹಿಡಿದ ಕೈಗನ್ನಗಡಿಯಾಗಿದೆ ಎಂದಿದ್ದಾರೆ.
ಬೀದರ ಕೇಂದ್ರ ಸ್ಥಾನದಲ್ಲಿ ಜಿಲ್ಲಾ ಸಂಕೀರ್ಣ ನಿರ್ಮಾಣ ಕಟ್ಟಡ ಮಾಡುವುದು ಬಹಳ ಅಗತ್ಯವಾಗಿದೆ. ಒಬ್ಬರು ಕೇಂದ್ರ ಸಚಿವರು, ಬೀದರ ಜಿಲ್ಲೆಯ 6 ಶಾಸಕರು, ಬೀದರ ಜಿಲ್ಲೆಯನ್ನು ಪ್ರತಿನಿಧಿಸುವ 5 ಜನ ವಿಧಾನ ಪರಿಷತ್ ಸದಸ್ಯರಿದ್ದರೂ ಬೀದರ ಕೇಂದ್ರ ಸ್ಥಾನದಲ್ಲಿ ಮಾತ್ರ ಬೀದರ ಜಿಲ್ಲಾ ಸಂಕೀರ್ಣ ನಿರ್ಮಾಣದ ಬಗ್ಗೆ ಕಾಳಜಿ ವಹಿಸುತ್ತಿಲ್ಲವೇಕೆ? ಎಂಬುವುದು ಜಿಲ್ಲೆಯ ನಾಗರಿಕರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆಯಾಗಿದೆ ಎಂದು ಸೋನಾರೆ ತಿಳಿಸಿದ್ದಾರೆ.