ಜಿಲ್ಲಾ ಸಮ್ಮೇಳನ ಯಶಸ್ಸಿಗೆ ಕಸಾಪ ಅಧ್ಯಕ್ಷ ಹಣಮಂತ ಶೇರಿ ಕರೆ

ಕಲಬುರಗಿ.ಮಾ.03:ಮಾರ್ಚ 9, 10 ರಂದು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ಜಿಡಗಾ ಗ್ರಾಮದಲ್ಲಿ ಜರುಗಲಿರುವ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಜಿಲ್ಲೆಯ ಹಾಗೂ ಆಳಂದ ತಾಲೂಕಿನ ಜನರು ಸಹಕರಿಸಬೇಕೆಂದು ಆಳಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಣಮಂತ ಶೇರಿ ಖಜೂರಿ ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಡಗಾ ಮಠದ ಪೂಜ್ಯ ಮುರುಘರಾಜೇಂದ್ರ ಶಿವಯೋಗಿಗಳ ಸಾನಿಧ್ಯದಲ್ಲಿ ಹಾಗೂ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರ ಸಹಕಾರದೊಂದಿಗೆ, ಡಾ. ಕಲ್ಯಾಣರಾವ ಪೋಲಿಸ್‍ಪಾಟೀಲ ಸರ್ವಾಧ್ಯಕ್ಷತೆಯಲ್ಲಿ ಸಾಸಿರ ನಾಡು ಎಂದು ಪ್ರಸಿದ್ಧವಾಗಿರುವ ಆಳಂದ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿದೆ ಜಿಲ್ಲೆಯ ಸಾಹಿತ್ಯ ಆಸಕ್ತರು, ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಶಿಕ್ಷಕ ಸಾಹಿತಿಗಳಿಗೆ ಓಓಡಿ ಸೌಲಭ್ಯ ಕಲ್ಪಿಸಲಾಗಿದ್ದು ಇದರ ಸದುಪಯೋಗವನ್ನು ಶಿಕ್ಷಕರು ಪಡೆದುಕೊಳ್ಳಬೇಕು ಅಲ್ಲದೇ ಎರಡು ದಿನಗಳ ಅಕ್ಷರ ಜಾತ್ರೆಯಲ್ಲಿ ವಿವಿಧ ಕಲಾ ಪ್ರದರ್ಶನಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.