ಜಿಲ್ಲೆಯನ್ನು ಕಡೆಗಣಿಸಿದರೆ ಸರ್ಕಾರಕ್ಕೆ ತಕ್ಕ ಪಾಠ

ರಾಯಚೂರು,ಜ.೧೯- ಜಿಲ್ಲೆಯಲ್ಲಿ ಏಮ್ಸ್ ಮಂಜೂರಾತಿಗಾಗಿ ಸುಮಾರು ೨೫೧ ದಿನದಿಂದ ನಡೆದ ಹೋರಾಟವನ್ನು ಸರ್ಕಾರ ನಿರ್ಲಕ್ಷ ಮಾಡುತ್ತಿದೆ. ಇಂದಿನಿಂದ ನಡೆದ ಉಪವಾಸ ಸತ್ಯಾಗ್ರಹವನ್ನು ನಿರ್ಲಕ್ಷ ಮಾಡಿದರೆ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವದು, ಶೀಘ್ರ ರಾಜ್ಯ ಸರ್ಕಾರ ಕೇಂದ್ರಕ್ಕೆ ರಾಯಚೂರಿನಲ್ಲಿ ಸ್ಥಾಪಿಸಲು ಶಿಫಾರಸ್ಸು ಮಾಡಬೇಕೆಂದು ಎಐಸಿಸಿ ಕಾರ್ಯದರ್ಶಿ ಎನ್‌ಎಸ್ ಬೋಸರಾಜು ಒತ್ತಾಯಿಸಿದರು.
ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಿರಂತರವಾಗಿ ೨೫೧ ದಿನಗಳಿಂದ ನಡೆದ ಹಾಗೂ ಇಂದಿನಿಂದ ಪ್ರಾರಂಭವಾದ ಉಪವಾಸ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿದರು.
ಜಿಲ್ಲೆಯಲ್ಲಿನ ವೈದ್ಯಕೀಯ ಅವ್ಯವಸ್ತೆಯಿಂದ ಜನ ಸಾಮಾನ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು, ಹೈದ್ರಾಬಾದ್ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಸಂಕಷ್ಟ ಅನುಭವಿಸುವದನ್ನು ನಿತ್ಯ ನೋಡುತ್ತಿದ್ದೇವೆ.
ಜಿಲ್ಲೆಯಲ್ಲಿ ಏಮ್ಸ್ ಸಂಸ್ಥೆ ಸ್ಥಾಪಿಸುವುದರಿಂದ ಹಿಂದುಳಿದ ಹಣೆಪಟ್ಟಿಯನ್ನು ಕಳಚಿ ವಿವಿಧ ಆಯಾಮಗಳಲ್ಲಿ ಅಭಿವೃದ್ಧಿಹೊಂದುತ್ತದೆ. ಹಿಂದುಳಿದ ಜಿಲ್ಲೆಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ತಮ್ಮ ವೈದ್ಯಕೀಯ ಸ್ನಾತಕೊತ್ತರ ಶಿಕ್ಷಣ ಅಧ್ಯಾಯನ ಮಾಡಲು ಅನುಕೂಲವಾಗಲಿದೆ. ಏಮ್ಸ್ ಸ್ಥಾಪನೆಯಿಂದ ಉದ್ಯೋಗಾವಕಾಶಗಳು ಹೆಚ್ಚುತ್ತವೆ. ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಅಭಿವೃದ್ಧಿಗಾಗಿ ಏಮ್ಸ್ ಮಂಜೂರು ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೋರಾಟ ಸಮೀತಿಯ ಬಸವರಾಜ ಕಳಸ, ಮಾಜಿ ನಗರ ಸಭೆ ಸದಸ್ಯ ರುದ್ರಪ್ಪ ಅಂಗಡಿ, ಅಶೋಕಕುಮಾರ್ ಜೈನ್, ಗುರುರಾಜ್ ಕುಲ್ಕರ್ಣಿ ವಿನಯ ಕುಮಾರ್ ಸೇರಿದಂತೆ ಇತರರಿದ್ದರು.

ಬಾಕ್ಸ್
ಸರ್ಕಾರದಿಂದ ಪ್ರಾದೇಶಿಕ ಅಸಮತೋಲನೆ-
ಜಿಲ್ಲೆಯನ್ನು ಕಡೆಗಣಿಸುವ ಸರ್ಕಾರಗಳ ನಡೆ ಖಂಡನೀಯ- ರವಿ ಬೋಸರಾಜು