ಜಿಲ್ಲೆಯಲ್ಲಿ ಇಬ್ಬರು ಕೋವಿಡ್ ಸೋಂಕಿತರ ಸಾವುಃ ಜಿಲ್ಲಾಧಿಕಾರಿಗಳು

ವಿಜಯಪುರ ಜೂ.9-ಜಿಲ್ಲೆಯಲ್ಲಿ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 66 ವರ್ಷದ ವೃದ್ಧ ರೋಗಿ ಸಂಖ್ಯೆ 2230589, ಅವರು ಮೃತಪಟ್ಟಿದ್ದಾರೆ. ಅವರು ಸಾರಿ, ಕೆಮ್ಮು ಹಾಗೂ ಉಸಿರಾಟ,ರಕ್ತದೊತ್ತಡ ತೊಂದರೆಯಿಂದ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 36 ವರ್ಷದ ಯುವತಿ ರೋಗಿ ಸಂಖ್ಯೆ 2629600, ಹೋಮ್ ಕ್ವಾರಂಟೈನ್ ಇದ್ದ ಸಂದರ್ಭದಲ್ಲಿ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.