ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಯಾವುದೇ ಗೊಂದಲವಿಲ್ಲ

ರಾಯಚೂರು,ಆ.೧೪-
ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಿವದಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈಗಾಗಲೇ ಕೇಂದ್ರಕ್ಕೆ ರಾಯಚೂರು ಜಿಲ್ಲೆಯ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಯಾವುದೆ ಗೊಂದಲವಿಲ್ಲ. ರಾಯಚೂರಿನಲ್ಲಿ ಸ್ಥಾಪಿಸಲು ಸರ್ಕಾರ ಬದ್ದವಾಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅರುಣ್ ದೋತರಬಂಡಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ಪ್ರತಿಕ್ರಿಯಿಸಿದ ಅವರು ಸುಮಾರು ೫೦೦ ದಿನಗಳಿಂದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವಂತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹೋರಾಟ ನಡೆಯುತ್ತಿದೆ. ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ.
ಹಿಂದುಳಿದ ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವುದರಿಂದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ನಾಂದಿಯಾಗಲಿದೆ. ನಮಗೆ ನಮ್ಮ ಸರ್ಕಾರದ ಮೇಲೆ ವಿಶ್ವಾಸವಿದೆ ರಾಯಚೂರು ಜಿಲ್ಲೆಯಲ್ಲಿ ಏನ್ ಸ್ಥಾಪಿಸಲಾಗುವುದು ಯಾವುದೇ ಗೊಂದಲ ಬೇಡ ಎಂದು ಅಭಿಪ್ರಾಯ ತಿಳಿಸಿದ್ದಾರೆ.