ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಅಣುಕು ಕಾರ್ಯಾಚರಣೆ

ಮೈಸೂರು : ಜ.02: ಆರೋಗ್ಯ ಸಚಿವಾಲಯದ ಸೂಚನೆಯಂತೆ ಇಂದು ಮೈಸೂರು ಜಿಲ್ಲೆಯ ಮೂರು ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಅಣುಕು ಕಾರ್ಯಾಚರಣೆ ನಡೆಯಲಿದೆ.
ಬಿಳಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆ, ಮೈಸೂರು ನಗರದ ಜಯನಗರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾ ಅಣುಕು ಕಾರ್ಯಾಚರಣೆ ನಡೆಯಲಿದೆ.
ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಲಸಿಕಾ ಕಾರ್ಯಾಚರಣೆ ನಡೆಯಲಿದ್ದು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಪ್ರತಿ ಕೇಂದ್ರಗಳಲ್ಲಿ ಲಸಿಕೆ ಪಡೆಯಲಿರುವ ತಲಾ 25ಮಂದಿಯನ್ನು ಗುರುತಿಸಲಾಗಿದೆ.


ಪ್ರತಿ ಲಸಿಕಾ ಕೇಂದ್ರದಲ್ಲಿ ಮೂರು ಕೊಠಡಿಗಳನ್ನು (ನಿರೀಕ್ಷಣಾ ಕೊಠಡಿ, ಲಸಿಕಾ ಕೊಠಡಿ, ನಿಗಾ ಕೊಠಡಿ)ಮೀಸಲಿಡಲಾಗಿದ್ದು ಐವರು ಲಸಿಕಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಲಸಿಕೆ ಪಡೆದವರು 30ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇರಬೇಕು. ಇದು ಕೇವಲ ಅಣುಕು ಕಾರ್ಯಾಚರಣೆ ಮಾತ್ರ. ಇಲ್ಲಿ ಯಾವುದೇ ಕೋವಿಡ್ -19ಲಸಿಕೆ ನೀಡಲಾಗುವುದಿಲ್ಲ. ಜನರು ಯಾವುದೇ ವದಂತಿಗಳಿಗೆ ಕಿವಿಕೊಡಬೇಡಿ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.