ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಅಭಾವವಿಲ್ಲ: ಶೆಟ್ಟರ್


ಹುಬ್ಬಳ್ಳಿ, ಜೂ 6: ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅಗತ್ಯತೆಯ ಮೇರೆಗೆ ಆದ್ಯತಾ ವಲಯದ ಪ್ರತಿಯೊಬ್ಬರಿಗೂ ಕೋವಿಡ್ ವ್ಯಾಕ್ಸಿನ್ ಲಭ್ಯವಿದೆ. ಈ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ನಗರದ ಸಕ್ರ್ಯೂಟ್ ಹೌಸಿನಲ್ಲಿ ನಡೆದ ಕೋವಿಡ್ ನಿರ್ವಹಣೆ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ಒದಗಿಸಲು ಯಾವುದೇ ಕೊರತೆಯಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನುರಿತ ವೈದ್ಯಕೀಯ ಸಿಬ್ಬಂದಿಯಿಂದ ಚಿಕಿತ್ಸೆ, ತಕ್ಷಣ ಪರಿಹಾರ ನೀಡುವ ವ್ಯವಸ್ಥೆ ಹೊಂದಲಾಗಿದೆ. ನಗರ ಪ್ರದೇಶದಲ್ಲಿಯೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ವ್ಯವಸ್ಥೆಯನ್ನು ಒದಗಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ತರಹದ ಕುಂದುಕೊರತೆ ಉಂಟಾಗದಂತೆ ಮುಂಜಾಗ್ರತೆಯನ್ನು ಹೊಂದಿರಬೇಕು. ಸಾರ್ವಜನಿಕರು ಲಸಿಕೆ ಬಗ್ಗೆ ತಪ್ಪು ಕಲ್ಪನೆ ಹೊಂದಬಾರದು. ಎಲ್ಲರೂ ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದು ಕೋವಿಡ್ ತಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದಿನಕರ್ ಉಪಸ್ಥಿತರಿದ್ದರು.