ಜಿಲ್ಲೆಯಲ್ಲಿ ನಾಲ್ವರು ಕೋವಿಡ್ ಸೋಂಕಿತರ ಸಾವು

ವಿಜಯಪುರ, ಮೇ.4-ಜಿಲ್ಲೆಯಲ್ಲಿ ನಾಲ್ವರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 55 ವರ್ಷ ವಯೋಮಾನದ ಮಹಿಳೆ ರೋಗಿ ಸಂಖ್ಯೆ 1371056 ಅವರು ಮೃತಪಟ್ಟಿದ್ದಾರೆ.ಅವರು ಐಎಲ್‍ಐ, ಕೆಮ್ಮು, ತೀವ್ರ ರಕ್ತದೊತ್ತಡ, ಉಸಿರಾಟ ತೊಂದರೆ, ಸಕ್ಕರೆ ಖಾಯಿಲೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅದರಂತೆ 80 ವರ್ಷದ ವೃದ್ದ ರೋಗಿ ಸಂಖ್ಯೆ 1373053 ಐ ಎಲ್ ಐ,ಕೆಮ್ಮು, ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡ, ಸಕ್ಕರೆ ಖಾಯಿಲೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇವರು ಮೃತಪಟ್ಟಿದ್ದಾರೆ.
ಅದರಂತೆ 58 ವರ್ಷ ದ ಮಹಿಳೆ ರೋಗಿ ಸಂಖ್ಯೆ 1426254 ಖಾಸಗಿ ಆಸ್ಪತ್ರೆಗೆ ತೀವ್ರ ಶ್ವಾಸಕೋಶ ತೊಂದರೆ, ಕೆಮ್ಮು, ಸಕ್ಕರೆ ಖಾಯಿಲೆ, ರಕ್ತದೊತ್ತಡ ದಿಂದ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಇವರು ಮೃತ ಪಟ್ಟಿದ್ದಾರೆ.
ಇನ್ನೋರ್ವ 50 ವರ್ಷದ ಪುರುಷ ರೋಗಿ ಸಂಖ್ಯೆ 1475855 ಅವರು ಉಸಿರಾಟ ತೊಂದರೆ, ರಕ್ತದೊತ್ತಡದಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯ ಸಂಸ್ಕಾರವನ್ನು ಶಿಷ್ಠಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.