ಜಿಲ್ಲೆಯಲ್ಲಿ  ನೀತಿ ಸಂಹಿತೆ ಜಾರಿ- ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ 

ದಾವಣಗೆರೆ.ಮಾ.30; ಭಾರತ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 29ರ ಬುಧವಾರದಿಂದಲೇ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಪಾರದರ್ಶಕ ಹಾಗೂ ಸುವ್ಯವಸ್ಥಿತ ಚುನಾವಣೆಗೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಜಿಲ್ಲೆಯಾದ್ಯಂತ 24 ಗಂಟೆಯೊಳಗಾಗಿ ಫೆಕ್ಸ್, ಬ್ಯಾನರ್, ಹೊರ್ಡೀಂಗ್ಸ್ ತೆರವುಗೊಳಿಸಲಾಗುವುದು. ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.ಚುನಾವಣಾ ವೇಳೆಪಟ್ಟಿ ಬಗ್ಗೆ ಮಾಹಿತಿ ನೀಡಿದ ಅವರು, ದಿನಾಂಕ 13-04-2023ರ ಗುರುವಾರ ಅಧಿಸೂಚನೆ ಪ್ರಕಟಣೆ ಹೊರಡಿಸಲಾಗುವುದು, ಅಂದಿನಿAದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ದಿನಾಂಕ 20-04-2023 ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ದಿ.21-04-2023 ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ದಿ.24-04-2024 ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ದಿ.10-05-2023 ಬುಧವಾರ ಮತದಾನದ ಜರುಗಲಿದೆ. ದಿ.13-05-2023 ಶನಿವಾರ ಮತ ಎಣಿಕೆ ನಡೆಯಲಿದೆ ಹಾಗೂ 15-05-2023 ಸೋಮವಾರ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದರು.ಜಿಲ್ಲೆಯ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ 7,15,168 ಪುರುಷರು, 7,12,510 ಮಹಿಳೆಯರು, 118 ಇತರರು, 466 ಸೇವಾ ಮತದಾರರು ಒಳಗೊಂಡAತೆ 14,28,262 ಮತದಾರರಿದ್ದಾರೆ. ಸಾರ್ವತ್ರಿಕ ಚುನಾವಣೆಗಾಗಿ ಎಂ-3 ಮಾದರಿಯ 3241 ಬ್ಯಾಲೆಟ್, 2274 ಕಂಟ್ರೋಲ್ ಯೂನಿಟ್, 2463 ವಿವಿ ಪ್ಯಾಟ್ ಬಳಕೆ ಮಾಡಲಾಗುತ್ತಿದೆ. ಇನ್ನು ಎರಡು ಮೂರು ದಿನಗಳಲ್ಲಿ ವಿಧಾನ ಸಭಾ ಕ್ಷೇತ್ರವಾರು ಚುನಾವಣಾಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದರು.