ಜಿಲ್ಲೆಯಲ್ಲಿ ಮೂರು ಜನ ಕೋವಿಡ್ ಸೋಂಕಿತರ ಸಾವು: ಜಿಲ್ಲಾಧಿಕಾರಿ

ವಿಜಯಪುರ, ಜೂ.11-ಜಿಲ್ಲೆಯಲ್ಲಿ ಮೂರು ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 40 ವರ್ಷದ ಪುರುಷ ರೋಗಿ ಸಂಖ್ಯೆ 2449974, ಅವರು ಮೃತಪಟ್ಟಿದ್ದಾರೆ. ಅವರು ಐ.ಎಲ್.ಐ, ಹಾಗೂ ಉಸಿರಾಟದ ತೊಂದರೆಯಿಂದ ಬಳಲಿ ವಿಜಯಪುರ ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅದರಂತೆ 60 ವರ್ಷದ ವೃದ್ಧ ರೋಗಿ ಸಂಖ್ಯೆ 2533316, ಸಾರಿ, ರಕ್ತದೊತ್ತಡ, ಉಸಿರಾಟದ ತೊಂದರೆಯಿಂದ ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಅವರು ಮೃತಪಟ್ಟಿದ್ದಾರೆ.
ಇನ್ನೋರ್ವ 50 ವರ್ಷದ ಪುರುಷ ರೋಗಿ ಸಂಖ್ಯೆ 2751204, ಐ.ಎಲ್.ಐ, ತೊಂದರೆಯಿಂದ ಖಾಸಗಿ ಆಸ್ಪತ್ರೆ ವಿಜಯಪುರದಲ್ಲಿ ದಾಖಲಾಗಿದ್ದರು ಆದರೆ ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.