
ಬಳ್ಳಾರಿ,ಏ.14: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ದಿನ 5 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮೊದಲನೇ ದಿನವಾದ ಗುರುವಾರದಂದು 92-ಸಿರುಗುಪ್ಪ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಎಸ್.ಗಾದಿಲಿಂಗಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಟಿ.ದರಪ್ಪ ನಾಯಕ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಹೆಚ್.ಸಿ.ರಾಧಾ ಅವರು ನಾಮಪತ್ರ ಸಲ್ಲಿಸಿದ್ದಾರೆ.
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಕೆಆರ್‍ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷ ಅಭ್ಯರ್ಥಿಯಾಗಿ ಶ್ರೀನಿವಾಸ ರೆಡ್ಡಿ ಮತ್ತು ಎಸ್‍ಯುಸಿಐ (ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ) ಪಕ್ಷದ ಅಭ್ಯರ್ಥಿಯಾಗಿ ಆರ್.ಸೋಮಶೇಖರ ಗೌಡ ಅವರು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.