ಜಿಲ್ಲೆಯಲ್ಲಿ ೨೧ ಬ್ಲಾಕ್ ಫಂಗಲ್ ಕೇಸ್

ದೇವದುರ್ಗ.ಮೇ.೩೧-ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಇಳಿಮುಖವಾಗಿದ್ದರೂ ಜೂನ್ ೭ ರವರೆಗೆ ಲಾಕ್‌ಡೌನ್ ಮುಂದುವರೆಯಲಿದೆ. ಈವರೆಗೆ ಜಿಲ್ಲೆಯಲ್ಲಿ ೨೧ ಬ್ಲಾಕ್ ಫಂಗಲ್ ಕೇಸ್‌ಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.
ಪಟ್ಟಣದ ಕೆ.ಶಿವನಗೌಡ ನಾಯಕ್ ಅನ್ನದಾಸೋಹ ಕೇಂದ್ರಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹೆಚ್ಚಿನ ಸಂಖ್ಯೆಯ ಟೆಸ್ಟ್ ಮಾಡಿಸಿದ್ದರಿಂದ ಜಿಲ್ಲೆಯಲ್ಲಿ ಸೋಂಕು ಪ್ರಮಾಣ ತಗ್ಗಿದೆ. ಅಧಿಕಾರಿಗಳು ಡೋರ್ ಟು ಡೋರ್ ಚೆಕ್ ಮಾಡಿದ್ದರಿಂದ ಸೋಂಕು ನಿಯಂತ್ರಣ ಸಾಧ್ಯವಾಗಿದೆ. ಎರಡನೇ ಹಂತದ ಡೋರ್ ಟು ಡೋರ್ ವಿಸಿಟ್ ಕೈಗೊಂಡಿದ್ದು, ಸೋಂಕು ಸಂಪೂರ್ಣ ಕಂಟ್ರೋಲ್ ಮಾಡಲು ಶ್ರಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ್ದರೂ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗಿಲ್ಲ. ಯೂರಿಯಾ ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಅಗತ್ಯ ದಾಸ್ತಾನು ಮಾಡಲಾಗಿದೆ. ಬಿತ್ತನೆ ಬೀಜ ಸೇರಿ ಅಗತ್ಯ ದಾಸ್ತಾನು ರೈತ ಸಂಪರ್ಕ ಕೇಂದ್ರಗಳಲ್ಲಿ ಮಾಡಲಾಗಿದೆ ಎಂದರು.
ಬತ್ತ ಖರೀದಿ ಕೇಂದ್ರ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ರೈತರು ಹೆಸರು ನೋಂದಣಿ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಖರೀದಿ ಕೇಂದ್ರ ಆರಂಭಕ್ಕೆ ವಿಳಂಬವಾಗಿದೆ ಎಂದು ಹೇಳಿದರು.