ಜಿಲ್ಲೆಯಲ್ಲಿ 139 ಜನರಿಗೆ ಕೋವಿಡ್ ಸೋಂಕು ದೃಢ: 62 ಮಂದಿ ಬಿಡುಗಡೆ

ಚಿತ್ರದುರ್ಗ,ಏ.30; 
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರ ವರದಿಯಲ್ಲಿ 139 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17,129ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 79, ಚಳ್ಳಕೆರೆ 12, ಹಿರಿಯೂರು 16, ಹೊಳಲ್ಕೆರೆ 7, ಹೊಸದುರ್ಗ 23, ಮೊಳಕಾಲ್ಮುರು ತಾಲ್ಲೂಕಿನಲ್ಲಿ 02 ಪ್ರಕರಣ ಸೇರಿದಂತೆ ಒಟ್ಟು 139 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ  62 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 2675 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 139 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 17,129 ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಕೋವಿಡ್‍ನಿಂದ ಮೃತರಾಗಿದ್ದು ಇದುವರೆಗೂ ಒಟ್ಟು 72 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,999 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1058 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,37,823 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 4,14,054 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,94,629 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1587 ಜನರ ವರದಿ ಬರುವುದು ಬಾಕಿ ಇದೆ. 709 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.