ಜಿಲ್ಲೆಯಲ್ಲಿ 14 ಜನರಿಗೆ ಕೋವಿಡ್ ಸೋಂಕು ದೃಢ

YICHANG, CHINA - JANUARY 21 2020: Travelers wearing protective masks walk outside a railway station in Yichang in central China's Hubei province Tuesday, Jan. 21, 2020. China has stepped up the measures to control the spread of the new coronavirus that has infected hundreds of people in China.- PHOTOGRAPH BY Feature China / Barcroft Media (Photo credit should read Feature China / Barcroft Media via Getty Images)

ಚಿತ್ರದುರ್ಗ, ಜ.12; ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 14 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,451 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 07 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 746 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 14 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 14,451 ಕ್ಕೆ ಏರಿಕೆಯಾಗಿದೆ. ಒಟ್ಟು 68 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 14,327 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 56 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,15,199 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 2,44,913 ಜನರ ಮಾದರಿ ಸಂಗ್ರಹಿಸಲಾಗಿದ್ದು, 2,28,961 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 895 ಜನರ ವರದಿ ಬರುವುದು ಬಾಕಿ ಇದೆ. 606 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.