ಜಿಲ್ಲೆಯಲ್ಲಿ 19 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ,ಏ.2; ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 19 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,152ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 1223 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 19 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 15,152ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 69 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,016 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 67 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,23,980 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 3,59,682 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,43,352 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 494 ಜನರ ವರದಿ ಬರುವುದು ಬಾಕಿ ಇದೆ. 684 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.