ಜಿಲ್ಲೆಯಲ್ಲಿ 4 ಜನ ಕೋವಿಡ್ ಸೋಂಕಿತರ ಸಾವುಃ ಜಿಲ್ಲಾಧಿಕಾರಿ

ವಿಜಯಪುರ, ಜೂ.3-ಜಿಲ್ಲೆಯಲ್ಲಿ 4 ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 45 ವರ್ಷದ ಪುರುಷ ರೋಗಿ ಸಂಖ್ಯೆ 1732703, ಅವರು ಮೃತಪಟ್ಟಿದ್ದಾರೆ. ಅವರು ಐ.ಎಲ್.ಐ. ಉಸಿರಾಟದ ತೊಂದರೆಯಿಂದ ಬಳಲಿ ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ .
ಅದರಂತೆ 60 ವರ್ಷದ ವೃದ್ಧ ರೋಗಿ ಸಂಖ್ಯೆ 2192619, ಸಾರಿ, ಉಸಿರಾಟದ ತೊಂದರೆಯಿಂದ ಜಿಲ್ಲಾ ಆಸ್ಪತ್ರೆ ವಿಜಯಪುರದಲ್ಲಿ ದಾಖಲಾಗಿದ್ದರು ಅವರು ಮೃತಪಟ್ಟಿದ್ದಾರೆ.
ಇನ್ನೋರ್ವ 52 ವರ್ಷದ ವೃದ್ಧೆ ರೋಗಿ ಸಂಖ್ಯೆ 2078463, ಐ ಎಲ್ ಐ ಉಸಿರಾಟದ ತೊಂದರೆಯಿಂದ ತಾಲೂಕಾ ಆಸ್ಪತ್ರೆ ಸಿಂದಗಿಯಲ್ಲಿ ದಾಖಲಾಗಿದ್ದರು ಆದರೆ ಮೃತಪಟ್ಟಿದ್ದಾರೆ.
75 ವರ್ಷದ ವೃದ್ಧ ರೋಗಿ ಸಂಖ್ಯೆ 1410295, ಐ.ಎಲ್.ಐ. ಉಸಿರಾಟದ ತೊಂದರೆಯಿಂದ ಬಳಲಿ, ತಾಲೂಕು ಆಸ್ಪತ್ರೆ ಮುದ್ದೇಬಿಹಾಳದಲ್ಲಿ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.