ಜಿಲ್ಲೆಯಲ್ಲಿ 5 ಜನ ಕೋವಿಡ್ ಸೋಂಕಿತರ ಸಾವು ಜಿಲ್ಲಾಧಿಕಾರಿ

ವಿಜಯಪುರ, ಮೇ.2-ಜಿಲ್ಲೆಯಲ್ಲಿ 5 ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 29 ವರ್ಷದ ಪುರುಷ ರೋಗಿ ಸಂಖ್ಯೆ 1608842, ಅವರು ಮೃತಪಟ್ಟಿದ್ದಾರೆ. ಅವರು ಕೆಮ್ಮು, ಉಸಿರಾಟನಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 20 ವರ್ಷದ ಯುವತಿ ರೋಗಿ ಸಂಖ್ಯೆ 1894473, ಉಸಿರಾಟದ ತೊಂದರೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಅವರು ಮೃತಪಟ್ಟಿದ್ದಾರೆ.
ಇನ್ನೋರ್ವ 45 ವರ್ಷದ ವೃದ್ಧ ರೋಗಿ ಸಂಖ್ಯೆ 1874098, ಕೆಮ್ಮು, ಉಸಿರಾಟದ ತೊಂದರೆಯಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಮೃತಪಟ್ಟಿದ್ದಾರೆ.
61 ವರ್ಷದ ವೃದ್ಧೆ ರೋಗಿ ಸಂಖ್ಯೆ 1789536, ಕೆಮ್ಮು, ನೆಗಡಿ, ರಕ್ತದೊತ್ತಡ ಖಾಯಿಲೆ ಯಿಂದ ಬಳಲಿ, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 70 ವರ್ಷದ ವೃದ್ಧ ರೋಗಿ ಸಂಖ್ಯೆ 1830766, ರಕ್ತದೊತ್ತಡ. ಉಸಿರಾಟದ ತೊಂದರೆಯಿಂದ ಬಳಲಿ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರೂ ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.