ಜಿಲ್ಲೆಯಲ್ಲಿ 9 ಜನ ಕೋವಿಡ್ ಸೋಂಕಿತರ ಸಾವು

ವಿಜಯಪುರ.ಮೇ :17:ಜಿಲ್ಲೆಯಲ್ಲಿ ಒಂಬತ್ತು ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ ಸುನೀಲಕುಮಾರ ಅವರು ತಿಳಿಸಿದ್ದಾರೆ.

ಕೋವಿಡ್ ಸೋಂಕಿತ 60 ವರ್ಷದ ವೃದ್ದೆ ರೋಗಿ ಸಂಖ್ಯೆ 1437020, ಅವರು ಮೃತಪಟ್ಟಿದ್ದಾರೆ. ಅವರು ಉಸಿರಾಟ ಹಾಗೂ ರಕ್ತದೊತ್ತಡ ಖಾಯಿಲೆ ನಿಂದ ಬಳಲಿ ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅದರಂತೆ 53 ವರ್ಷದ ವೃದ್ಧ ರೋಗಿ ಸಂಖ್ಯೆ 1469374, ಉಸಿರಾಟದ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು ಅವರು ಮೃತಪಟ್ಟಿದ್ದಾರೆ.

ಇನ್ನೋರ್ವ 40 ವರ್ಷದ ಸ್ತ್ರೀ ರೋಗಿ ಸಂಖ್ಯೆ 1517191 , ರಕ್ತದೊತ್ತಡ, ಉಸಿರಾಟದ ತೊಂದರೆಯಿಂದ ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು ಆದರೆ ಮೃತಪಟ್ಟಿದ್ದಾರೆ.

60 ವರ್ಷದ ವೃದ್ಧೆ ರೋಗಿ ಸಂಖ್ಯೆ 1436999 ಉಸಿರಾಟದ ತೊಂದರೆಯಿಂದ ,ಸಕ್ಕರೆ ಖಾಯಿಲೆ ಯಿಂದ ಬಳಲಿ, ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅದರಂತೆ 61 ವರ್ಷದ ವೃದ್ಧ ರೋಗಿ ಸಂಖ್ಯೆ 1639228 ,ಕೆಮ್ಮು, ಸಕ್ಕರೆ, ರಕ್ತದೊತ್ತಡ, ಉಸಿರಾಟದ ತೊಂದರೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು. ಅವರೂ ಮೃತಪಟ್ಟಿದ್ದಾರೆ.

68 ವರ್ಷದ ವೃದ್ಧ ರೋಗಿ ಸಂಖ್ಯೆ 1735821 ಇವರು ಸಾರಿ, ಉಸಿರಾಟ ತೊಂದರೆ,ರಕ್ತದೊತ್ತಡತೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

52 ವರ್ಷದ ವೃದ್ಧ ರೋಗಿ ಸಂಖ್ಯೆ 1840945 ಅವರು ಸಾರಿ, ಉಸಿರಾಟದ ತೊಂದರೆ, ಜ್ವರ, , ದಿಂದ ಬಳಲಿ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು , ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

19 ವರ್ಷದ ಯುವತಿ ರೋಗಿ ಸಂಖ್ಯೆ 1967376 ಇವರು ಉಸಿರಾಟದ ತೊಂದರೆಯಿಂದ ಬಳಲಿ,ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅದರಂತೆ 45 ವರ್ಷದ ವೃದ್ದ ರೋಗಿ ಸಂಖ್ಯೆ 1978483, ಉಸಿರಾಟ ತೊಂದರೆ, ಸಕ್ಕರೆ ಖಾಯಿಲೆ ದಿಂದ ಬಳಲಿ ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ .

ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.