ಜಿಲ್ಲೆಯಲ್ಲಿ 9 ಜನ ಕೋವಿಡ್ ಸೋಂಕಿತರ ಸಾವು

ವಿಜಯಪುರ, ಮೇ.18-ಜಿಲ್ಲೆಯಲ್ಲಿ ಒಂಬತ್ತು ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 71 ವರ್ಷದ ವೃದ್ದೆ ರೋಗಿ ಸಂಖ್ಯೆ 1698979, ಅವರು ಮೃತಪಟ್ಟಿದ್ದಾರೆ. ಅವರು ಉಸಿರಾಟ ಹಾಗೂ ರಕ್ತದೊತ್ತಡ ಖಾಯಿಲೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 40 ವರ್ಷದ ವೃದ್ಧ ರೋಗಿ ಸಂಖ್ಯೆ 1517183, ಕೆಮ್ಮು,ಉಸಿರಾಟದ ತೊಂದರೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರೂ ಅವರು ಮೃತಪಟ್ಟಿದ್ದಾರೆ.
ಇನ್ನೋರ್ವ 70 ವರ್ಷದ ವೃದ್ಧ ರೋಗಿ ಸಂಖ್ಯೆ 1723392, ಕೆಮ್ಮು, ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮೃತಪಟ್ಟಿದ್ದಾರೆ.
65 ವರ್ಷದ ವೃದ್ಧೆ ರೋಗಿ ಸಂಖ್ಯೆ 1896157, ಉಸಿರಾಟದ ತೊಂದರೆಯಿಂದ, ರಕ್ತದೊತ್ತಡ ಖಾಯಿಲೆಯಿಂದ ಬಳಲಿ, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 75 ವರ್ಷದ ವೃದ್ಧ ರೋಗಿ ಸಂಖ್ಯೆ 1896158, ಕೆಮ್ಮು, ರಕ್ತದೊತ್ತಡ, ಉಸಿರಾಟದ ತೊಂದರೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರೂ ಮೃತಪಟ್ಟಿದ್ದಾರೆ.
35 ವರ್ಷದ ಸ್ತ್ರೀ ರೋಗಿ ಸಂಖ್ಯೆ 1944420 ಇವರು ಸಾರಿ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
71 ವರ್ಷದ ವೃದ್ಧ ರೋಗಿ ಸಂಖ್ಯೆ 1794140 ಅವರು ಸಾರಿ, ಉಸಿರಾಟದ ತೊಂದರೆ, ಜ್ವರದಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
45 ವರ್ಷದ ಸ್ತ್ರೀ ರೋಗಿ ಸಂಖ್ಯೆ 1845093 ಇವರು ಕೆಮ್ಮು, ನೆಗಡಿ,ಉಸಿರಾಟದ ತೊಂದರೆಯಿಂದ ಬಳಲಿ, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 46 ವರ್ಷದ ವೃದ್ದ ರೋಗಿ ಸಂಖ್ಯೆ 1517223, ಕೆಮ್ಮು, ಉಸಿರಾಟ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ .
ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.