ಜಿಲ್ಲೆಯಾದ್ಯಂತ ಜೂ. 14ರ‌ ವರೆಗೆ ಲಾಕ್ ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ

ಕಲಬುರಗಿ,ಜೂ.6: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಲಾಕ್ ಡೌನ್ ಅವಧಿಯನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಜೂನ್ 7ರ ಬೆಳಗ್ಗೆ 6 ಗಂಟೆಯಿಂದ ಜೂನ್ 14ರ ಬೆಳಿಗ್ಗೆ 6 ಗಂಟೆ ವರೆಗೆ ಲಾಕ್ ಡೌನ್ ವಿಸ್ತರಿಸಿದಲ್ಲದೆ ಲಾಕ್ ಡೌನ್ ನಲ್ಲಿ‌ ವಿಧಿಸಿರುವ ಷರತ್ತಿಗೊಳಪಟ್ಟು ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144ರನ್ವಯ ಡಿ.ಸಿ.‌ವಿ.ವಿ.ಜ್ಯೋತ್ಸ್ನಾ ಅವರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ರವಿವಾರ ಆದೇಶ ಹೊರಡಿಸಿದ್ದಾರೆ.