ಜಿಲ್ಲೆಯಾದ್ಯಂತ ಪ್ರತಿ ದಿನ ರಾತ್ರಿ-ವಾರಾಂತ್ಯ ಕಫ್ರ್ಯೂ ಜಾರಿ

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಚಿತ್ರದುರ್ಗ,ಏ.23: ಕೋವಿಡ್-19 ಸಾಂಕ್ರಾಮಿಕ ರೋಗದ ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ರಾತ್ರಿ ಮತ್ತು ವಾರಾಂತ್ಯ ಕಫ್ರ್ಯೂ ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಕಡ್ಡಾಯ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ವiನ್ನಿಕೇರಿ ಸೂಚನೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಏಪ್ರಿಲ್ 21 ರಿಂದ ಮೇ 4ರವರೆಗೆ ಪ್ರತಿ ದಿನ ರಾತ್ರಿ 9 ರಿಂದ ಬೆಳಿಗ್ಗೆ 6ರವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರುತ್ತದೆ. ಅಲ್ಲದೇ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಪೂರ್ತಿಯಾಗಿ ಕಫ್ರ್ಯೂ ಜಾರಿಯಲ್ಲಿರುತ್ತದೆ. ಅನುಮತಿಸಲಾದ ಅಗತ್ಯ ಸೇವೆಯನ್ನು ಹೊರತುಪಡಿಸಿ ಸಾರ್ವಜನಿಕರು ಅನಾವಶ್ಯಕ ಚಟುವಟಿಕೆಗಳು ಹಾಗೂ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್-19 ನಿಯಮಾವಳಿಗಳನ್ನು ತಪ್ಪದೇ ಪಾಲಿಸಬೇಕು.  
ರಾತ್ರಿ ಕಫ್ರ್ಯೂ ಸಮಯದಲ್ಲಿ ಅನುಮತಿಸಲಾದ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಾಹನ ಸಂಚಾರ ಬಂದ್ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಪೂರ್ತಿ ಕಫ್ರ್ಯೂ ಇರಲಿದೆ. ಬೆಳಿಗ್ಗೆ 6 ರಿಂದ 10ರವರೆಗೆ ಆಹಾರ ಸಾಮಾಗ್ರಿ ಖರೀದಿಗೆ ಅವಕಾಶ ನೀಡಲಾಗಿದೆ.
ನಿರ್ಬಂಧ: ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ. ಆದರೆ ದೈನಂದಿನ ಪೂಜಾ ಕೈಂಕರ್ಯಕ್ಕೆ ತಡೆ ಇಲ್ಲ. ಶಾಲಾ-ಕಾಲೇಜು, ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರ, ಚಿತ್ರಮಂದಿರ, ಶಾಪಿಂಗ್ ಮಾಲ್, ಜಿಮ್, ಸ್ಪಾ, ಯೋಗಾಕೇಂದ್ರ, ಕ್ರೀಡಾ ಸಂಕೀರ್ಣ, ಈಜುಕೋಳ, ಮನೋರಂಜನಾ  ಪಾರ್ಕ್, ರಂಗಮಂದಿರ, ಸಭಾಂಗಣ,  ಬಾರ್, ಆಡಿಟೋರಿಯಂನಂತಹ ಸ್ಥಳಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಎಲ್ಲ ರೀತಿಯ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಹಾಗೂ ಇತರೆ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
ಅನುಮತಿ: ಕೋವಿಡ್ ಸುರಕ್ಷಾ ನಿಯಮಗಳೊಂದಿಗೆ ಎಲ್ಲ ಬಗೆಯ ನಿರ್ಮಾಣ, ದುರಸ್ತಿ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಎಲ್ಲ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಬಹುದು. ಸಿಬ್ಬಂದಿ ಓಡಾಟಕ್ಕೆ ಸಂಸ್ಥೆಗಳಿಂದ ಪಡೆದುಕೊಂಡ ಐಡಿ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ. ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು, ತರಕಾರಿ, ಹಾಲಿನ ಬೂತ್, ಮೀನು, ಮಾಂಸ, ಪಶು ಆಹಾರ ಅಂಗಡಿಗಳ ಸೇವೆ ಅಭಾದಿತ. ಮೈದಾನ ಇಲ್ಲವೆ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂವಿನ ವ್ಯಾಪಾರ ನಡೆಸಲು ಅನುಮತಿ ಕಟ್ಟಡದಲ್ಲಿ ನಡೆಸುವಂತಿಲ್ಲ. ಬ್ಯಾಂಕ್, ವಿಮಾ ಕಚೇರಿ, ಎಟಿಎಂ, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ, ಷೇರು ವಿನಿಮಯ ಸೇವಾ ಕೇಂದ್ರಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದೊಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಮುಕ್ತ ಅವಕಾಶ. ಯಾವುದೇ ಪೂರ್ವನುಮತಿ ಬೇಕಿಲ್ಲ. ಮೆಟ್ರೋ, ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ. ಒಟ್ಟು ಆಸನ ಸಾಮಾಥ್ರ್ಯ ಶೇ.50 ಮಾತ್ರ. ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿ, ಹಾಲು ಅಂಗಡಿಗಳು ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ತೆರೆದಿರುತ್ತವೆ.
ಮದುವೆಗೆ 50 ಜನ: ಸರ್ಕಾರದ ಹೊಸ ಮಾರ್ಗಸೂಚಿಯನ್ವಯ ಮದುವೆ ಸಮಾರಂಭಗಳಿಗೆ ಜಿಲ್ಲಾಡಳಿತದ ಅನುಮತಿ ಕಡ್ಡಾಯವಾಗಿದೆ. ಮದುವೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಮದುವೆ ಸಮಾರಂಭಗಳಿಗೆ ಪಾಸ್ ಪಡೆಯುವುದು ಕಡ್ಡಾಯವಾಗಿದೆ. ಅಂತ್ಯಕ್ರಿಯೆಗೆ 20 ಜನರು ಮಾತ್ರ ಪಾಲ್ಗೊಳ್ಳಬಹುದಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ, ಸ್ಯಾನಿಟೈಜೇಷನ್, ಧರ್ಮಲ್ ಸ್ಕ್ರೀನಿಂಗ್ ಬಳಕೆ ಕುರಿತು ಅಧಿಕಾರಿಗಳಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯವೂ ನಡೆಯುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವಿಧಿಸಿದ ಹೊಸ ಮಾರ್ಗಸೂಚಿಗಳ ಯಥಾವತ್ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.