ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಪ್ ಅಭ್ಯರ್ಥಿಗಳು ಕಣಕ್ಕೆ : ಅರವಿಂದ

ಲಿಂಗಸುಗೂರು.ಸೆ.೨೨-೨೦೨೩ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆಪ್ ಅಭ್ಯರ್ಥಿಗಳು ಸ್ಪರ್ಧೆಗಿಳಿಯಲಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಸಾಮಾಜಿಕ ನ್ಯಾಯ ಸಂಚಾಲಕ ಎಂ.ಅರವಿಂದ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ಕರ್ನಾಟಕದಲ್ಲಿ ಸುಳ್ಳಿನ ಸರಕಾರಗಳು ಆಡಳಿತದಲ್ಲಿದ್ದು, ನಮ್ಮ ಜನಸಾಮಾನ್ಯರು ಈ ಸರಕಾರದ ಪೊಳ್ಳು ಭರವಸೆಗಳಿಂದ ರೋಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ವತಿಯಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದ್ದೇವೆ. ಇದಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಕುಪ್ಪಣ್ಣ ಮಾಣಿಕ್, ಸಂಯೋಜಕರಾದ ಶಿವರಾಜ ಗುತ್ತೇದಾರ, ಯಂಕನಗೌಡ, ಅಯ್ಯಣ್ಣ ಸ್ವಾಮಿ ಸೇರಿ ಇತರರು ಇದ್ದರು.