
ಕಲಬುರಗಿ,ಮೇ.26:ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸ.ಸಾ.ಆಸ್ಪತ್ರೆ/ ಸ.ಆ.ಕೇಂದ್ರ/ಪ್ರಾ.ಆ.ಕೇಂದ್ರಗಳಲ್ಲಿ ಉಚಿತವಾಗಿ ಹಾವು ವಿಷ ನಿರೋಧಕ ಲಸಿಕೆಯು (ಎ.ಎಸ್.ವಿ.) (ASV) ಲಭ್ಯವಿರುತ್ತದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ವಿಷಪೂರಿತ ಹಾವುಗಳು ಮನೆಗಳಿಗೆ ನುಗ್ಗಿ ಹಾವು ಕಡಿತದ ಪ್ರಕರಣಗಳು ಹೆಚ್ಚಾಗುವ ಸಂಭವ ಇರುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಕುರಿತು ಭಯ ಪಡದೆ ಹಾವು ಕಡಿತ ಸಂದರ್ಭದಲ್ಲಿ ತಮ್ಮ ಹತ್ತಿರದ ಆರೋಗ್ಯ ಸಂಸ್ಥೆಗೆ ಭೇಟಿ ನೀಡಿ ಉಚಿತ ಹಾವು ವಿಷ ನಿರೋಧಕ ಲಸಿಕೆಯ (ASV) ಯನ್ನು ಪಡೆಯಬಹುದಾಗಿದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಲಸಿಕೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.