ಜಿಲ್ಲೆಯ ಮೂರು ಜನ ಕೆಎಎಸ್ ಅಧಿಕಾರಿ ವರ್ಗಾವಣೆ

ರಾಯಚೂರು, ಫೆ.೨- ಮುಂದಿನ ಲೋಕಸಭೆ ಚುನಾವಣೆ ಹಿನ್ನಲೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಸಹಾಯಕ ಆಯುಕ್ತ ಮಹಿಬೂಬಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹೆಬೂಬ್ ಜಿಲಾನಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹಿಬೂಬ್ ಜಿಲಾನಿ ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸಹಾಯಕ ಆಯುಕ್ತ ಮಹಿಬೂಬಿ ಅವರನ್ನು ಚಿಕ್ಕೋಡಿಯ ಉಪವಿಭಾಗದ ಉಪವಿಭಾಗಾಧಿಕಾರಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರನ್ನು ಯಾವುದೇ ಸ್ಥಾನಕ್ಕೆ ವರ್ಗಾಹಿಸಿಲ್ಲ ಹಾಗೂ ರಾಯಚೂರು ಅಪರ ಜಿಲ್ಲಾಧಿಕಾರಿಗಳ ಸ್ಥಾನಕ್ಕೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಅಶೋಕ ದುಡಗುಂಟಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಲಬುರಗಿ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಯಾಗಿದ್ದ ಮಲ್ಲೇಶ ತಂಗಾ ಅವರನ್ನು ಹಾಗೂ ರಾಯಚೂರು ಸಹಾಯಕ ಆಯುಕ್ತರನ್ನಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಉಪವಿಭಾಗಾಧಿಕಾರಿಯಾಗಿದ್ದ ಎಸ್.ಎಸ್ ಸಂಪಗಾವಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.