
ವಿಜಯಪುರ: ಆ.12:ಜಿಲ್ಲೆಯಲ್ಲಿರುವ ವಸತಿಶಾಲೆಗಳಿಗೆ ನಿಯಮಿತವಾಗಿ ಅಧಿಕಾರಿಗಳು ಭೇಟಿ ನೀಡಿ ಸಮರ್ಪಕ ಬೋಧನೆ ಹಾಗೂ ಮೂಲಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಜರುಗಿದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ವಿವಿಧ ವೃತ್ತಿಪರ ತರಬೇತಿಗಳನ್ನು ಒದಗಿಸಲು ಹೆಚ್ಚಿನ ಗಮನ ಹರಿಸಬೇಕು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸಲು ಕ್ರಮ ವಹಿಸಬೇಕು.
ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಉದ್ಯೋಗ ಕೈಗೊಳ್ಳಲು ಬ್ಯಾಂಕ್‍ಗಳು ಸಾಲ-ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು. ಮಹಾನಗರ ಪಾಲಿಕೆಯ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಈಗಾಗಲೇ ಮನೆಗಳನ್ನು ವಿತರಿಸಲು ಕ್ರಮ ವಹಿಸಲಾಗುತ್ತಿದ್ದು, ಇನ್ನೂ ಬೇಡಿಕೆ ಬಂದಲ್ಲಿ ಬೇಡಿಕೆಗನುಗುಣವಾಗಿ ಮನೆಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಕುಂಠಿತಗೊಳ್ಳುತ್ತಿರುವ ಕುರಿತು, ಜಿಲ್ಲೆಯ ರೇಷ್ಮೆ ಕೃಷಿಗೆ ಉತ್ತೇಜನ ನೀಡಲು ಪ್ರೆರೇಪಿಸಬೇಕು. ಜಿಲ್ಲೆಯ ರೇಷ್ಮೆ ಮಾರಾಟಕ್ಕೆ ಹತ್ತಿರದಲ್ಲಿ ಯಾವುದೇ ಮಾರುಕಟ್ಟೆ ಲಭ್ಯವಿರುವುದಿಲ್ಲ. ರಾಮನಗರಕ್ಕೆ ಕೊಂಡೊಯ್ಯಬೇಕಾಗುವುದರಿಂದ ಪ್ರಯಾಣ ಸಾಗಣೆ ವೆಚ್ಚ ಭರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ರೈತರಿಗೆ ಉತ್ತೇಜನ ನೀಡಿದಂತಾಗುತ್ತದೆ. ಅದರಂತೆ ಜಿಲ್ಲೆಯ ಕೆಲವು ಉರ್ದು ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಇರುವುದು ಕಂಡು ಬಂದಿದ್ದು, ಈ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಹೇಳಿದರು.
ಸÀಮಿತಿ ಸದಸ್ಯರಾದ ರಫೀ ಭಂಡಾರಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮೌಲಾನಾ ಆಝಾಧ ವಸತಿ ಶಾಲೆ, ಅಲ್ಪಸಂಖ್ಯಾತರ ವಸತಿ ಶಾಲೆಗಳನ್ನು ಹೆಚ್ಚಿಸಬೇಕು. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಖಾಲಿ ಇರುವ ಶಿಕ್ಷಕರ ಭರ್ತಿ ಮಾಡಬೇಕು. ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ, ಶುದ್ಧ ಕುಡಿಯುವ ನೀರು ಸಮರ್ಪಕವಾಗಿ ಒದಗಿಸುವಂತೆ ಅವರು ಸಭೆಯ ಗಮನಕ್ಕೆ ತಂದರು.
ಸಭÉಯಲ್ಲಿ ಸಮಿತಿ ಸದಸ್ಯರಾದ ಜಂಬಕುಮಾರ ಬಾಗೇವಾಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಯಲ್ಲಮ್ಮ ಪಡೇಸೂರ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರವಣ್ಣವರ ಸೇರಿದಂತೆ ಪೆÇೀಲಿಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.