ಜಿಲ್ಲೆಯ ವಿವಿಧ ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ಪರಿಶಿಲನೆ

ಹನೂರು: ಜೂ.05: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ಅಧ್ಯಕ್ಷ ಬಿ. ಮಹದೇವ್ ಪ್ರಸಾದ್ (ಪ್ರಕಾಶ್) ಹಾಗೂ ಪಧಾಧಿಕಾರಿಗಳ ತಂಡ ಜಿಲ್ಲೆಯ ವಿವಿಧ ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಿ ನೌಕರರ ಕುಂದು ಕೊರತೆಗಳ ಬಗ್ಗೆ ವಿಚಾರಿಸಿ ಪರಿಶಿಲಿಸಿದರು.
ಮಲೆಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 110 ಸಿಬ್ಬಂದಿಗಳನ್ನು ಕೊವೀಡ್ ಕೇರ್ ಸೆಂಟರ್‍ಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜನೆಗೊಳಿಸಿರುವ ಹಿನ್ನಲೆಯಲ್ಲಿ ಸಿಬ್ಬಂದಿಗಳ ಕೊವೀಡ್ ಸೆಂಟರ್‍ಗಳಿಗೆ ತೆರಳಿ ಈ ಬಗ್ಗೆ ಸುದ್ದಿಗಾರೊಡನೆ ಮಾತನಾಡಿ, ಹನೂರು ಪಟ್ಟಣದ ಮುರಾರ್ಜಿ ವಸತಿ ಶಾಲೆ ಸೇರಿದಂತೆ ತಿಮಾರಾಜಿಪುರ, ವಡ್ಡಗೆರೆ, ಉಮ್ಮತ್ತೂರು, ಮಾದಾಪುರ, ಹರವೆ, ಮಲ್ಲಯ್ಯನಪುರ, ರಾಮಸಮುದ್ರ ಹಾಗೂ ಇತರೆ ವಿಶ್ವವಿದ್ಯಾನಿಲಯ ಹಾಗೂ ಮೆಡಿಕಲ್ ಕಾಲೇಜುಗಳ ಕೋವಿಡ್‍ಕೇರ್ ಸೆಂಟರ್ ನಲ್ಲಿ ಪ್ರಾಧಿಕಾರಿದ ಸುಮಾರು 110 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದರೆ. ಹಾಗಾಗಿ ಕೋವಿಡ್ ಕಾರ್ಯದಲ್ಲಿ ತೊಡಗಿರುವವನ್ನು ಬೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಕುಂದುಕರೆತೆಯನ್ನು ಆಲಿಸಿ ಅಪಾರ ಜಿಲ್ಲಾಧಿಕಾರಿಗಳನ್ನು ಸಹ ಬೇಟಿ ಮಾಡಿ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದೇನೆ. ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪ್ರಾಧಿಕಾರದ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ಗೌರವ ಅಧ್ಯಕ್ಷ ಕೆ.ಮಹದೇವಸ್ವಾಮಿ, ಉಪಾಧ್ಯಕ್ಷ ಮಹಾದೇವಸ್ವಾಮಿ, ಕೃಷ್ಣಮೂರ್ತಿ, ರಮೇಶ್ ಹಾಗೂ ಇತರಿದ್ದರು.