ಜಿಲ್ಲೆ ವಿಭಜನೆ ಹೋರಾಟ 13 ದಿನಕ್ಕೆ ಚೇಂಬರ್ ಆಫ್ ಕಾಮರ್ಸ್ ಬೆಂಬಲ

ಬಳ್ಳಾರಿ:ಡಿ.26- ಜಿಲ್ಲೆ ವಿಭಜನೆ ವಿರೋಧಿಸಿ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಇಂದು 13 ನೇ ದಿನಕ್ಕೆ ಕಾಲಿರಿಸಿದೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮುಂದಾಳತ್ವದಲ್ಲಿ ಇಂದ ಸಂಸ್ಥೆಯ ಅಧ್ಯಕ್ಷ. ವಿ. ರವಿಕುಮಾರ್ ಅವರ ನೇತೃತ್ವದಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ. ಕೆ. ಸುರೇಶ್ ಬಾಬು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ವಿವಿಧ ಕಮಿಟಿಗಳ ಚೇರ್‌ಮನ್‌ಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು. ಭಾಗವಹಿಸಿದ್ದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ರವಿಕುಮಾರ್ ಅವರು ಮಾತನಾಡಿ ಅಖಂಡ ಬಳ್ಳಾರಿ ಜಿಲ್ಲೆಯ ಬೇಡಿಕೆ ಈಡೇರುವವರೆಗೂ ನಮ್ಮೆಲ್ಲರ ಹೋರಾಟ ಹೀಗೆಯೇ ಮುಂದುವರೆಯುತ್ತದೆ ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲಾ ಹತ್ತಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರ ಎಸ್. ದೊಡ್ಡನಗೌಡ್, ದಲ್ಲಾಳಿ ವರ್ತಕರ ಸಂಘದ ಅಧ್ಯಕ್ಷ ಬಿ. ಮಹಸರುದ್ರಗೌಡ, ಕಾರ್ಯದರ್ಶಿ ವಿ. ರಾಮಚಂದ, ಬೀಜ, ಗೊಬ್ಬರ ಮತ್ತು ಕ್ರಿಮಿನಾಶಕ ವಿತರಕರ ಹಾಗು ಮಾರಾಟಗಾರರ ಸಂಘದ ಅಧ್ಯಕ್ಷ. ಜಿ. ಐನಾತ್ ರೆಡ್ಡಿ ಮತ್ತು ಇನ್ನೂ ಅನೇಕ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಇಂದಿನ ಧರಣಿಯಲ್ಲಿ ಪಾಲ್ಗೊಂಡು ಬಳ್ಳಾರಿ ಜಿಲ್ಲೆಯ ವಿಭಜನೆ ವಿರೋಧಿಸಿದರು.