ಜಿಲ್ಲೆ ವಿಭಜನೆ ಹೋರಾಟ 23 ನೇ ದಿನಕ್ಕೆ ವೀರಶೈವ ಜಂಗಮ ಅರ್ಚಕ, ಪುರೋಹಿತರ ಸಂಘ ಭಾಗಿ

ಬಳ್ಳಾರಿ ಜ 05 : ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಇಂದು ದಿನ 23 ದಿನಕ್ಕೆ ಕಾಲಿಟ್ಟಿದೆ.
ಇಂದಿನ‌ ಹೋರಾಟದಲ್ಲಿ ಬಳ್ಳಾರಿ ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು
ಪುರೋಹಿತರ ಸಂಘ ಬೆಂಬಲ‌ ವ್ಯಕ್ತಪಡಿಸಿ ಧರಣಿಯಲ್ಲಿ‌ವಪಾಲ್ಗೊಂಡಿತ್ತು.
ಹೋರಾಟ ಸಮಿತಿಯ ಜೊತೆಗೆ ಅರ್ಚಕ ಸಂಘದ ಪದಾಧಿಕಾರಿಗಳು ಬಿಳಿ ಅಂಗಿ, ಪಂಜೆ ಮತ್ತು ಮಡಿಪಂಜೆ ಹಾಕಿಕೊಂಡು
ಜಿಲ್ಲಾಧಿಕಾರಿಗಳ ಕಚೇರಿ‌ ಮುಂದಿನ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಜಿಲ್ಲೆ ವಿಭಜನೆ ಬಗ್ಗೆ ಸರ್ಕಾರ ತೆಗೆದುಕೊಂಡ ನಡುವೆ ನಿರ್ಧಾರವನ್ನು ವಿರೋಧಿಸಿ ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡೋದು ತರವಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಈ ಜಿಲ್ಲೆಯ ವಿಭಜನೆ ಮಾಡೋದು ಸೂಕ್ತವಲ್ಲ. ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆಯನ್ನ ಕೈಬಿಡಬೇಕೆಂದು ಆಗ್ರಹಿಸಲಾಗಿತ್ತು.