ಜಿ.ಎನ್.ಡಿ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

ಬೀದರ:ಎ.1: ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿ ಎಂ.ಡಿ. ಹುಜೈಫಾ ಖುರೇಶಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಅವರಿಗೆ ಚಿನ್ನದ ಪದಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಾನು ಕೂಡ ಸಾಮಾನ್ಯ ವಿದ್ಯಾರ್ಥಿಗಳಂತೆಯೇ ಇದ್ದೆ. ಉಪನ್ಯಾಸಕರು ಉತ್ತಮ ಮಾರ್ಗದರ್ಶನ ನೀಡಿ, ಆತ್ಮವಿಶ್ವಾಸ ತುಂಬಿದ್ದರಿಂದಲೇ ಪರೀಕ್ಷೆಯಲ್ಲಿ ಸಾಧನೆಗೈಯಲು ಸಾಧ್ಯವಾಯಿತು ಎಂದು ಎಂ.ಡಿ. ಹುಜೈಫಾ ಹೇಳಿದರು.

ವಿದ್ಯಾರ್ಥಿಯ ಸಾಧನೆ ಹೆಮ್ಮೆ ಉಂಟು ಮಾಡಿದೆ ಎಂದು ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಬಲಬೀರ್‌ಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್ ನುಡಿದರು.

ಕಷ್ಟಪಟ್ಟು ಓದಿದರೆ ಸಾಧನೆ ಸಾಧ್ಯವಿದೆ.
ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಳ್ಳಬೇಕು. ಅದನ್ನು ನನಸಾಗಿಸಿಕೊಳ್ಳಲು ನಿರಂತರ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.