ಜಿ.ಪಂ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ

ಮೈಸೂರು ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ: ನಿರ್ಬಂಧ ಹೇರುವ ಕುರಿತು ಚರ್ಚೆ
ಮೈಸೂರು. ಏ.5: ಮೈಸೂರು ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಅಗತ್ಯಕ್ರಮಗಳ ಕುರಿತು ಚರ್ಚೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಳಕ್ಕೆ ಕಾರಣ ತಿಳಿದು ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ರಚಿಸುತ್ತಿದೆ. ಕೆಲವು ವಿಧಾನಗಳಿಗೆ ನಿರ್ಬಂಧ ಹೇರುವ ಕುರಿತು ಚರ್ಚೆ ನಡೆದಿದೆ.
ಮದುವೆ, ಸಭೆ ಸಮಾರಂಭ ಮಾರುಕಟ್ಟೆ, ಸೇರಿದಂತೆ ಕೆಲವೆಡೆ ನಿಯಮ ಪಾಲನೆಗೆ ಹಾಗೂ ಜನದಟ್ಟಣೆ ಕಡಿಮೆಗೊಳಿಸಲು ಚರ್ಚೆ ನಡೆದಿದೆ. ಮಾರುಕಟ್ಟೆಗಳಲ್ಲಿ ವ್ಯಾಪಾರಸ್ಥರಿಗೆ ಕೊರೋನಾ ಟೆಸ್ಟ್ ಮಾಡಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಸಭೆಯಲ್ಲಿ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ ಕೊರೋನಾ ಜಾಸ್ತಿ ಆಗ್ತಿದೆ. ಮದುವೆ, ಜಾತ್ರೆ, ಹಬ್ಬಗಳು ನಡೆಯುತ್ತಿವೆ. ಉದ್ಘಾಟನೆಗೆ ನಮ್ಮನ್ನೇ ಕರೆಯುತ್ತಾರೆ. ಏನೂ ಮಾಡೋಕೆ ಆಗುತ್ತಿಲ್ಲ. ಇನ್ನು ಮುಂದಾದರೂ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂದು ಶಾಸಕ ಎಲ್.ನಾಗೇಂದ್ರ ಮನವಿ ಮಾಡಿದರು.
ಐಸಿಯು ನಿರ್ವಹಣೆಗೆ ಅಗತ್ಯ ಸಿಬ್ಬಂದಿ ನೀಡುವಂತೆ ಖಾಸಗಿ ಆಸ್ಪತ್ರೆ ಮುಖ್ಯಸ್ಥರು ಮನವಿ ಮಾಡಿದ್ದಾರೆ. ಕೊರೋನಾ ತಡೆಗಟ್ಟಲು ಮತ್ತೆ ತರಕಾರಿ ಮಾರುಕಟ್ಟೆಗಳನ್ನು ವಿಕೇಂದ್ರಿಕರಣ ಮಾಡಲು ಅಧಿಕಾರಿಗಳು ಮನವಿ ಮಾಡಿದರು. ಹೋಟೆಲ್ ಗಳನ್ನು ರಾತ್ರಿ 10 ಗಂಟೆ ನಂತರ ಮುಚ್ಚಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.