ಜಿ-20 ನಾಯಕರಿಗೆ ಪ್ರೆಸಿಡೆಂಟ್ ಅಫ್ ಭಾರತ್ ಆಮಂತ್ರಣ: ಇಂಡಿಯಾ ನಾಯಕರ ಕಿಡಿ

ನವದೆಹಲಿ, ಸೆ.5-ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವ ನಾಯಕರಿಗೆ ಪ್ರಸಿಡೆಂಟ್ ಇಂಡಿಯಾ ಬದಲು ಪ್ರೆಸಿಡೆಂಟ್ ಆಫ್ ಭಾರತ್ ಎಂಬ ಹೆಸರಿನಲ್ಲಿ ರಾಷ್ಟ್ರಪತಿಗಳು ನೀಡಿರುವ ಔತಣಕೂಟದ ಆಮಂತ್ರಣ ಪತ್ರಿಕೆ ಭಾರೀ ಕೋಲಾಹಲಹಕ್ಕೆ ಎಡೆಮಾಡಿಕೊಟ್ಡಿದೆ.
ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಇಂಡಿಯಾ ಒಕ್ಕೂಟದ ಮುಖಂಡರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಕಾರ್ಯದರ್ಶಿ ವೇಣುಗೋಪಾಲ್ ಮಾತನಾಡಿ, ವಿನಾಶಕಾರಿ ತಲೆ ಮಾತ್ರವೆ ಜನರನ್ನು ಹೇಗೆ ವಿಭಜಿಸಬಹುದು ಎಂದು ಯೋಚಿಸಲು ಸಾಧ್ಯ. ಕೇಂದ್ರ ಸರ್ಕಾರ ಭಾರತೀಯರು ಮತ್ತು ಇಂಡಿಯನ್ಸ್ ನಡುವೆ ಬಿರುಕು ಉಂಟು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ , ರಾಷ್ಟ್ರಪತಿಯವರ ಆಮಂತ್ರಣ ಪತ್ರಿಕೆ ಬಗ್ಗೆ ಹೇಳಿಕೆ ನೀಡಿದ್ದು, ಬಿಜೆಪಿ ಇಂಡಿಯಾವನ್ನು ಅಳಿಸಿ ಹಾಕಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದು, ದೇಶ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ನೂರಾರು ಕೋಟಿ ಭಾರತೀಯರದ್ದು ಎಂದು ಹೇಳಿರುವರು.
ಬಿಜೆಪಿ ರಾಜ್ಯಸಭಾ ಸದಸ್ಯ ಹರನಾಥ್ ಸಿಂಗ್ ಯಾದವ್ ದೆಹಲಿಯಲ್ಲಿ ಪ್ರತಿಕ್ರಿಯಿಸಿ, ಇಂಡಿಯಾ ಎಂಬ ಪದವು ಬ್ರಿಟಿಷರು ನಮಗೆ ನೀಡಿದ ನಿಂದನೆಯಾಗಿದೆ. ಆದರೆ ಭಾರತ ಎಂಬ ಪದವು ನಮ್ಮ ಸಂಸ್ಕೃತಿಯ ಸಂಕೇತವಾಗಿದೆ. ನಮ್ಮ ಸಂವಿಧಾನದಲ್ಲಿ ಬದಲಾವಣೆ ಮಾಡುವ ದೃಷ್ಟಿಯಿಂದ ಭಾರತ್ ಎಂಬ ಪದವನ್ನು ಸೇರಿಸಬೇಕೆಂದು ಬಯಸುತ್ತೇನೆ ಎಂದು ತಿಳಿಸಿದರು.