ಜೀತ ಪದ್ಧತಿ ನಿರ್ಮೂಲನೆಗೆ ಪಣ ತೊಡಿ


ಗದಗ, ಫೆ.10: ಜೀತ ಪದ್ಧತಿ ಅಮಾನವೀಯ ಪದ್ಧತಿಯಾಗಿದ್ದು ಇದು ಗುಲಾಮಗಿರಿ ಪದ್ಧತಿಯ ಪಳಿಯುಳಿಕೆಯಾಗಿದೆ. ಜೀತ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಪಣ ತೊಡಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ತಿಳಿಸಿದರು.
ಗದಗ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕಾರ್ಮಿಕ ಇಲಾಖೆ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯನ್ನು ಉದ್ಘಾಟಿಸಿ ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ದತ್ತು ಮಾರ್ಗಸೂಚಿಗಳು-2022 ಕುರಿತು ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳು ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‍ನ ಜನನ ಮತ್ತು ಮರಣ ನೋಂದಣಾಧಿಕಾರಿಗಳ ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀತ ಪದ್ಧತಿ ಗುಲಾಮಗಿರಿಗಿಂತ ಬಹಳ ವ್ಯತ್ಯಾಸ ಇಲ್ಲವಾಗಿದೆ. ಮನುಷ್ಯರೆಲ್ಲರೂ ಘನತೆಯಿಂದ ಬದುಕಬೇಕು. ಬಡತನ, ಸಾಲ ಪಡೆದ ಕಾರಣ, ಹೀಗೆ ವಿವಿಧ ಕಾರಣಗಳಿಂದ ಒಬ್ಬ ವ್ಯಕ್ತಿಯನ್ನು ಜೀತಕ್ಕೆ ಇಟ್ಟುಕೊಂಡು ಅವನನ್ನು ದುಡಿಸಿಕೊಳ್ಳುವುದು ಜೀತ ಪದ್ಧತಿಯಾಗಿದೆ. ಅವನಿಗೆ ನಿರೀಕ್ಷಿತ ಸಂಬಳ ಸಿಗುವುದಿಲ್ಲ ಹಾಗೂ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಅವಕಾಶವಿರುವುದಿಲ್ಲ. ಜೀತ ಪದ್ಧತಿಯನ್ನು ಸಂವಿಧಾನದಲ್ಲಿ ನಿಷೇಧಿಸಲಾಗಿದೆ ಹಾಗೂ ಅಪರಾಧವೆಂದು ಪರಿಗಣಿಸಲಾಗಿದೆ. ಒಬ್ಬ ವ್ಯಕ್ತಿಯನ್ನು ಜೀತಕ್ಕೆ ಇಟ್ಟುಕೊಂಡು ದುಡಿಸಿಕೊಳ್ಳುತ್ತಿದ್ದರೆ ಇಟ್ಟುಕೊಂಡ ಮಾಲೀಕನಿಗೆ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ. ಜೀತ ಪದ್ಧತಿ ನಿರ್ಮೂಲನೆಗಾಗಿ ವಿವಿಧ ಇಲಾಖೆಗಳೊಂದಿಗೆ ಸಂಘ ಸಂಸ್ಥೆಗಳ ಸಮುದಾಯಗಳ ಸಹಭಾಗಿತ್ವ ಅವಶ್ಯಕವಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಹರೀಶ ಜೋಗಿ ಅವರು ಮಕ್ಕಳ ಹಕ್ಕುಗಳ, ಪೆÇೀಕ್ಸೋ ಕಾಯ್ದೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಾಲನ್ಯಾಯ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಸಿಸ್ಟರ್ ಡುಲ್ಸಿನ್ ಬಾಲ ನ್ಯಾಯ ಕಾಯಿದೆ ( ಮಕ್ಕಳ ಪಾಲನೆ ಮತ್ತು ರಕ್ಷಣೆ ) ಕಾಯ್ದೆ , ದತ್ತು ಮಾರ್ಗಸೂಚಿ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೆÇಲೀಸ ವರಿಷ್ಟಾಧಿಕಾರಿ ಎಂ.ಬಿ. ಸಂಕದ, ಜಿ.ಪಂ. ಯೋಜನಾ ನಿರ್ದೇಶಕ ಚಳಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಮಹಾಂತೇಶ ಕೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ರಫೀಕಾ ಹಳ್ಳೂರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.