ಜೀವನಕ್ಕೆ ನೈತಿಕ ಮೌಲ್ಯಗಳು ಅತೀ ಮುಖ್ಯ: ಶಂಕರ ದೇವನೂರು

(ಸಂಜೆವಾಣಿ ವಾರ್ತೆ)
ವಿಜಯಪುರ: ಜು.5:ವ್ಯಕ್ತಿಯ ಜೀವನದಲ್ಲಿ ನೈತಿಕ ಮೌಲ್ಯಗಳು ಅತೀ ಮುಖ್ಯವಾಗಿರುತ್ತವೆ ನಾವು ಜೀವನವನ್ನು ಸುಂದರವಾಗಿ ಕಟ್ಟಿಕೊಳ್ಳಬೇಕಾದರೆ ನೈತಿಕ ಮೌಲ್ಯಗಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಆಧ್ಯಾತ್ಮಿಕ ಚಿಂತಕ ಶಂಕರ ದೇವನೂರು ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ವಿಭಾಗ ಹಾಗೂ ಅಹಲ್ಯಾಬಾಯಿ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿದ್ದ “ವೃತ್ತಿಯಲ್ಲಿ ನೈತಿಕ ಮೌಲ್ಯಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವ್ಯಕ್ತಿಯ ವ್ಯಕ್ತಿತ್ವದಲ್ಲಿ ಬೆಳೆಸಿಕೊಳ್ಳುವ ನೈತಿಕ ಮೌಲ್ಯಗಳ ಬಗ್ಗೆ ತುಂಬಾ ಅರ್ಥಗರ್ಭಿತವಾಗಿ ಶರಣರ ವಚನಗಳ ಮೂಲಕ ತಿಳಿಸಿಕೊಡುವುದರ ಜೊತೆಗೆ ವಿದ್ಯಾರ್ಥಿನಿಯರ ಜೊತೆಗೆ ಸಂವಾದವನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ನಿಕಾಯದ ಡೀನ ಪ್ರೊ. ರಾಜಕುಮಾರ ಮಾಲಿಪಾಟೀಲ ಅಧ್ಯಕ್ಷತೆಯನ್ನುವಹಿಸಿದ್ದರು. ಸಮಾರಂಭದಲ್ಲಿ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಹೇಮಲತಾ ಎಚ್.ಎಂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಹಿಳಾ ಅಧ್ಯಯನ ವಿಭಾಗದ ಪ್ರಾದ್ಯಾಪಕಿ ಪ್ರೊ.ಲಕ್ಷ್ಮೀದೇವಿ ವೈ ಹಾಗೂ ಸಹಾಯಕ ಪ್ರಾಧ್ಯಾಪಕಿ ಡಾ.ಭಾಗ್ಯಶ್ರೀ ದೊಡಮನಿ ಹಾಗೂ ವಿವಿಯ ಸಮಾಜ ವಿಜ್ಞಾನ ನಿಕಾಯಗಳ ಪ್ರಾದ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ.ಸರೋಜಾ ಸಂತಿ ಅತಿಥಿಗಳ ಸ್ವಾಗತಿಸಿ ಪರಿಚಯಿಸಿದರು, ಡಾ.ರಜೀಯಾ ಬೇಗಂ ನಧಾಪ್ ವಂದಿಸಿದರು ಡಾ. ಶಶಿಕಲಾ ರಾಠೋಡರವರು ನಿರೂಪಿಸಿದರು.