
ಔರಾದ :ಆ.3: ಪಟ್ಟಣಗಳಲ್ಲದೆ ಗ್ರಾಮೀಣ ಭಾಗದಲ್ಲಿ ಸಹ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಜೀವ ರಕ್ಷಣಾ ಕವಚವಾದ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿರಿ ನಿಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಿ ಎಂದು ಔರಾದ ಪಿಎಸ್‍ಐ ಉಪೇಂದ್ರಕುಮಾರ್ ಅವರು ಮನವಿ ಮಾಡಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಬುಧವಾರ ಎಸ್ಪಿ ಚೆನ್ನಬಸವಣ್ಣ ಅವರ ಮಾರ್ಗದರ್ಶನದಲ್ಲಿ ಪೆÇಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಹಾಗೂ ಅಪಘಾತ ತಡೆಗೆ ಕೈಗೊಳ್ಳಬೇಕಾದ ನಿಯಮಗಳ ಬಗ್ಗೆ ನಡೆದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದಿನೇ ದಿನೇ ಅಪಘಾತಕ್ಕಿಡಾಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ, ಹೆಲ್ಮೆಟ್ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೆÇಲೀಸರ ಉದ್ದೆ?ಶವಲ್ಲ. ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವ ಕಾಪಾಡಲಿ ಎಂಬ ಸದುದ್ದೆ?ಶ ಪೆÇಲೀಸ್ ಇಲಾಖೆಯದ್ದಾಗಿದೆ. ಆದ್ದರಿಂದ ಸಾರ್ವಜನಿಕರು ಸ್ವಯಂ ಪ್ರೆ?ರಣೆಯಿಂದ ಹೆಲ್ಮೆಟ್ ಧರಿಸುವ ಮೂಲಕ ಪೆÇಲೀಸ್ ಇಲಾಖೆಯ ಕಾರ್ಯಕ್ಕೆ ಕೈಜೋಡಿಸಬೇಕು. ಮನೆಯಲ್ಲಿ ಯಾರೇ ಆದರೂ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದರೆ ಅವರನ್ನು ಎಚ್ಚರಿಸುವುದು ಎಲ್ಲರ ಕರ್ತವ್ಯ. ವಿಶೇಷವಾಗಿ ಯುವಕರು ವಾಹನವನ್ನು ಓವರ್ ಟೆಕ್ ಮಾಡಿ ಬೇಜವಾಬ್ದಾರಿತನದಿಂದ ವಾಹನ ಚಲಾಯಿಸಿ ಅಪಘಾತಕ್ಕಿಡಾಗುತ್ತಾರೆ ಕಡ್ಡಾಯವಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕ ಎಸ್.ಸಿ ರಾಠೋಡ್ ಮಾತನಾಡಿ, ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಬಾರದು. ಇನ್ನು ಮುಂದೆ ಎಲ್ಲರೂ ಮನೆಯಿಂದ ಬರುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ಬರಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಹೆಲ್ಮೆಟ್ ಧರಿಸದೇ ಸಂಚರಿಸುತ್ತಿರುವ 20ಕ್ಕೂ ಹೆಚ್ಚು ಜನರಿಗೆ ಹೆಲ್ಮೆಟ್ ನೀಡಿ ಜಾಗೃತಿ ಮೂಡಿಸಿದರು. ಅಲ್ಲದೇ ಅನೇಕರಿಗೆ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಎಎಸ್ ಐ ಸುನಿಲಕಮಾರ ಕೋರೆ, ಶಿವಾಜಿ, ಮೋಹನ, ಸಿಬ್ಬಂದಿಗಳಾದ ಸೂರ್ಯಕಾಂತ, ಜಗದೀಶ, ಉತ್ತಮ, ಲಕ್ಷ್ಮಣ, ವಿಜಯಕುಮಾರ, ಹರೀಶ, ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮುಕ್ತೆದಾರ ಸೇರಿದಂತೆ ಅನೇಕರು ಪಾಲ್ಗೊಂಡರು.