(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಜು.೧೫:ಮಹಿಳಾ ಸಬಲೀಕರಣಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ನೋಂದಣಿ ಜು. ೧೯ ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಪ್ರಕಟಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಪ್ರಕಟಿಸಿದ ಅವರು, ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ೨ ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಯಾವುದೇ ಕೊನೆ ದಿನಾಂಕ ನಿಗದಿ ಮಾಡಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ. ಉಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದರು.ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿದವರು ಯೋಜನೆಯ ಫಲಾನುಭವಿಯಾಗಿರುತ್ತಾರೆ ಎಂದವರು ಸ್ಪಷ್ಟಪಡಿಸಿ ಗೃಹಲಕ್ಷ್ಮಿ ಯೋಜನೆಗೆ ಆಧಾರ್‌ಕಾರ್ಡ್ ಸಲ್ಲಿಕೆ ಕಡ್ಡಾಯ ಮಾಡಲಾಗಿದ್ದು, ಆಧಾರ್‌ಕಾರ್ಡ್‌ಗೆ ಲಿಂಕ್ ಆಗಿರುವ ಬ್ಯಾಂಕ್‌ಖಾತೆಗೆ ನಗದು ಹಣ ವರ್ಗಾವಣೆಯಾಗಲಿದೆ ಎಂದು ಹೇಳಿದರು.
ಜು.೧೯ರಿಂದು ಏಕಾಏಕಿ ಕಚೇರಿಗಳಿಗೆ ದೌಡಾಯಿಸಿ ಅರ್ಜಿಗೆ ಸಾಲು ಸಾಲಾಗಿ, ಗುಂಪಾಗಿ ಬರುವ ಅಗತ್ಯವಿಲ್ಲ. ಅರ್ಹ ಮಹಿಳೆಗೆ ಇಲಾಖೆಯಿಂದಲೇ ಎಸ್‌ಎಂಎಸ್ ಬರಲಿದ್ದು, ಅದರಲ್ಲಿ ದಿನಾಂಕ, ಸಮಯ, ಸ್ಥಳ ಎಲ್ಲವೂ ನಿಗದಿಪಡಿಸಲಾಗಿದೆ.ಹೀಗಾಗಿ, ಎಸ್‌ಎಂಎಸ್ ಬಂದರೆ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ ಎಂದ ಅವರು, ಗ್ರಾಮಾಂತರ ಪುದೇಶದಲ್ಲಿ ವಾಸಿಸುವ ಮಹಿಳೆಯರು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ, ನಗರ ಪ್ರದೇಶದಲ್ಲಿರುವ ಮಹಿಳೆಯರು ಕರ್ನಾಟಕ ಒನ್, ಬೆಂಗಳೂರು ಒನ್, ಬಿಬಿಎಂಪಿ ವಾರ್ಡ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿವರಿಸಿದರು.ಪ್ರತಿಯೊಬ್ಬರು ಈ ಯೋಜನೆ ಅಡಿ ಬರಬೇಕೆನ್ನುವ ಗುರಿ ಸರ್ಕಾgಕ್ಕಿದೆ. ಹಾಗಾಗಿ, ಮಹಿಳೆಯರು ಅರ್ಜಿ ಸಲ್ಲಿಸಲು ಅನುಕೂಲವಾಗಲು “ಪ್ರಜಾ ಪ್ರತಿನಿಧಿ” ಸೇವಕರನ್ನು ನಿಯೋಜಿಸಲಾಗುವುದು. ಆಯಾ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ, ಅವರು ಆಯ್ಕೆ ಮಾಡುವ ಅಭ್ಯರ್ಥಿಗಳೇ ಪ್ರಜಾ ಪ್ರತಿನಿದಿಯಾಲಿದ್ದು, ಅವರು ಫಲಾನುಭವಿಗಳ ಮನೆಗೆ ಭೇಟಿ ನೀಡಿ ನೋಂದಣಿ ಮಾಡುವ ವ್ಯವಸ್ಥೆಯೂ ಮಾಡಲಾಗಿದೆ ಎಂದು ತಿಳಿಸಿದರು.
ಪ್ರತಿ ಫಲಾನುಭವಿಯ ನೊಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳದ ಬಗ್ಗೆ ಗೊಂದಲ ಇದ್ದಲ್ಲಿ, ಅವರು ಸಹಾಯವಾಣಿ ೧೯೦೨ಗೆ ಕರೆ ಮಾಡಿ ಅಥವಾ ೮೧೪೭೫೦ ೦೫೦೦ ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸಬಹುದಾಗಿದೆ. ಇನ್ನೂ, ನಾವು ನಿಗದಿಪಡಿಸಿದ ದಿನ, ಸಮಯಕ್ಕೆ ಹೋಗದೆ ಆಗಿದ್ದಲ್ಲಿ ಅಂತಹ ಮಹಿಳೆಯರು ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ ೫ ರಿಂದ ೭ ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹದಾಗಿದೆ ಎಂದು ಅವರು ಮಾಹಿತಿ ನೀಡಿದರು.
ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು. ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ತಿಂಗಳಿಗೆ ೨ ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಛಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದು. ಅದಕ್ಕೂ ೨ ಸಾವಿರ ರೂ.ಗಳನ್ನು ಆರ್‌ಟಿಜಿಎಸ್ ಮೂಲಕ ಜಮೆ ಮಾಡಲಾಗುವುದು ಎಂದು ಸಚಿವರು ನುಡಿದರು.
ಜು. ೧೭ ರಂದು ಚಾಲನೆ
ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾಂiiಕ್ರಮ ಜು. ೧೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದು, ಕಾಂಗ್ರೆಸ್‌ನ ವರಿಷ್ಠರಿಗೂ ಈ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಪತ್ರ ಬರೆಯಲಾಗಿದೆ. ವರಿಷ್ಠರು ಕಾರ್ಯಕ್ರಮದಲ್ಲಿ ಭಾಗಿಯಾಗುವರು ಎಂದರು.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ೫ ಗ್ಯಾರಂಟಿಗಳ ಪೈಕಿ ಈಗಾಗಲೇ ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಗಳು ಅನುಷ್ಠಾನವಾಗಿದ್ದು, ೪ನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನವಾಗುತ್ತಿದ್ದು, ಆಗಸ್ಟ್ ೧೭ ರ ನಂತರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದವರು ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ಲಾಭ ಮಹಿಳೆ ಮತ್ತು ಆಕೆಯ ಪತಿ ತೆರಿಗೆ ಅಥವಾ ಜಿಎಸ್‌ಟಿ ಪಾವತಿಸುತ್ತಿದ್ದರೆ ಅವರಿಗೆ ಸಿಗುವುದಿಲ್ಲ. ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಕುಟುಂಬದ ಯಜಮಾನಿಗೆ ಮೊಬೈಲ್‌ಗೆ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರಗಳನ್ನು ಎಸ್‌ಎಂಎಸ್ ಮೂಲಕ ರವನಿಸಲಾಗುತ್ತದೆ. ಅಂತವರು ನಿಗದಿತ ಬೆಂಗಳೂರು ಒನ್,
ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ. ಸ್ಥಳೀಯ ನಗರಾಡಳಿತ ಕಚೇರಿಗಳಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು ೧೯೦೨ಗೆ ಕರೆ ಮಾಡಿ ಅಥವಾ ೮೧೪೭೫೦೦೫೦೦ ನಂಬರ್‌ಗೆ ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್ ಬಾಪೂಜಿ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ ೫ ರಿಂದ ೭ ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹದಾಗಿದೆ ಎಂದು ಅವರು ಮಾಹಿತಿ ನೀಡಿದರು.ಯೋಜನಯು ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ
ಎಂದ ಅವರು, ಗ್ರಾಮ ಒನ್ ಬಾಪೂಜಿ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು ಎಂದು ಸಚಿವರು ವಿವರಿಸಿದರು.
ಇನ್ನೂ, ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸ ತಕ್ಕದ್ದಲ್ಲ. ಯೋಜನೆಯಡಿ ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿದ್ದು, ಯಾರಾದರೂ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.
ಪ್ರಜಾಪ್ರತಿನಿಧಿ ಕಾಂಗ್ರೆಸ್ ಕಾರ್ಯಕರ್ತರಲ್ಲ
ಪ್ರಜಾ ಪ್ರತಿನಿಧಿ ವ್ಯವಸ್ಥೆ ಜನರಿಗೆ ಅನುಕೂಲವಾಗಲು ಹೊರತು, ಪಕ್ಷದ ಪ್ರಚಾರಕ್ಕೆ ಅಲ್ಲ. ಅಲ್ಲದೆ, ಇವರು ಸರ್ಕಾರದಿಂದ ಗುರುತಿಸಲ್ಪಟ್ಟ, ಸ್ವಯಂಸೇವಕರು.ಅವರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇರುವುದಿಲ್ಲ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವರಿಸಿದರು.
*ಜು.೧೭ರಂದು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸಮಾರಂಭ
*ಜು.೧೯ರಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ
- ಎಸ್‌ಎಂಎಸ್ ಬಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
- ಅರ್ಜಿ ಸಲ್ಲಿಕೆ ದಿನಾಂಕ ತಪ್ಪಿದರೂ ಅವಕಾಶ
- ತೆರಿಗೆ, ಜಿಎಸ್‌ಟಿ ಪಾವತಿಸುವ ಮಹಿಳೆ, ಆಕೆ ಪತಿ ಇದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.
- ಗೃಹಲಕ್ಷ್ಮಿ ಸಹಾಯವಾಣಿ ೧೯೦೨