ಜು.೧೫ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ವಿಶ್ವಕರ್ಮ ಸಮಾಜ ಸಮೇವೇಶ

ರಾಯಚೂರು, ಜು.೧೩- ಜುಲೈ ೧೫ ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ, ಅಖಿಲ ಕರ್ನಾಟಕ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ ನಂಜುಂಡಿಯವರ ನೇತೃತ್ವದಲ್ಲಿ ರಾಜಮಟ್ಟದ ಶಿವ ಕರ್ಮ ಸಮಾಜ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ವೀರಶೈವ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬ್ರಹ್ಮ ಗಣೇಶ್ ವಕೀಲ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜುಲೈ ೧೫ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂಬರ್ ೩ ವೈಟ್ ಪೇಟಲ್ಸ್ ನಲ್ಲಿ ಸಮಾವೇಶ ನಡೆಯಲಿದೆ. ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ ವಿಶ್ವಕರ್ಮರ ನೇತೃತ್ವದಲ್ಲಿ ೩೧ ಜಿಲ್ಲೆಗಳ ಸಮಾಜದ ಮುಖಂಡರನ್ನ ಒಳಗೊಂಡ ರಾಜ್ಯಮಟ್ಟದ ವಿಶ್ವಕರ್ಮ ಸಮಾಜದ ಬೃಹತ್ ಸಮಾವೇಶವನ್ನು ಅತ್ಯಂತ ವೈಭವಯುತವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಉದ್ಘಾಟನೆಯನ್ನು ಮಾಡಲಿದ್ದಾರೆ. ಸಮಾವೇಶದ ಅಧ್ಯಕ್ಷತೆಯನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದೇಶದಲ್ಲಿರುವ ವಿಶ್ವಕರ್ಮ ಸಮಾಜದ ಸಂಸದರು, ಶಾಸಕರು, ರಾಷ್ಟ್ರ ನಾಯಕರು ಭಾಗವಹಿಸಲಿದ್ದಾರೆ. ಸಮಾವೇಶದ ಪ್ರಸ್ತಾವಿಕವನ್ನು ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ ನಂಜುಂಡಿ ವಿಶ್ವಕರ್ಮ ಅವರು ಮಾತನಾಡಲಿದ್ದಾರೆ ಎಂದರು.
ಕೆ ಪಿ ನಂಜುಂಡಿಯವರು ಸುಮಾರು ೨೩ ವರ್ಷಗಳಿಂದ ಪ್ರತಿ ಗ್ರಾಮ, ಹೋಬಳಿ, ತಾಲೂಕು, ಪಟ್ಟಣ, ನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ವಿಶ್ವಕರ್ಮ ಸಮಾಜದ ಸಂಘಟನೆಯನ್ನು ಗಟ್ಟಿಗೊಳಿಸಿದ್ದಾರೆ. ಸಮಾಜಕ್ಕೆ ವಿಶ್ವಕರ್ಮ ಅಭಿವೃದ್ಧಿ ನಿಗಮ, ವಿಶ್ವಕರ್ಮ ಜಯಂತಿ ಆಚರಣೆ, ಅಮರಶಿಲ್ಪಿ ಜಕಣಚಾರಿ ಸಂಸ್ಮರಣೋನೋತ್ಸ ದಿನಾಚರಣೆಯನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ವಿಶ್ವಕರ್ಮ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹೋರಾಟ ಮಾಡಲಿದ್ದೇವೆ.ಸಮಾವೇಶಕ್ಕೆ ಜಿಲ್ಲೆ ,ತಾಲೂಕು ಹೋಬಳಿ ಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗಿರೀಶ್ ಆಚಾರಿ,ಕೆ.ರಾಮು,ಗುರುಸ್ವಾಮಿ ಮಡ್ಡಿಪೇಟೆ,ಮೌನೇಶ್ ಇದ್ದರು.