ಜು.೨೪ ಪಂಚಾಕ್ಷರಿ ಗವಾಯಿಗಳ ಪುಣ್ಯ ದಿನಾಚರಣೆ ಅಂಗವಾಗಿ ಸಂಗೀತ ಸಮ್ಮೇಳನ

ರಾಯಚೂರು, ಜು.೨೨- ಶ್ರೀ ಪಂಚಾಕ್ಷರಿ ಗವಾಯಿಗಳ ಪುಣ್ಯತಿಥಿ ಸಂಸ್ಥೆ ವತಿಯಿಂದ ಪಂಚಾಕ್ಷರಿ ಗವಾಯಿಗಳ ಅವರ ಪುಣ್ಯ ದಿನಾಚರಣೆಯ ೪೨ನೇ ವರ್ಷದ ಸಂಗೀತ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಶ್ರೀ ಪಂಚಾಕ್ಷರಿ ಗವಾಯಿಗಳ ಪುಣ್ಯತಿಥಿ ಸಂಸ್ಥೆ ಅಧ್ಯಕ್ಷ ಸೂಗುರೇಶ ಅಸ್ಕಿಹಾಳ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜುಲೈ ೨೪ ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮ ಸಾನಿಧ್ಯವನ್ನು ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು,ಸೋಮವಾರಪೇಟೆ ಹಿರೇಮಠದ ರಾಚೋಟಿ ವೀರ ಶಿವಾಚಾರ್ಯ ಮಹಾಸ್ವಾಮಿ, ಗಬ್ಬೂರು ಬೂದಿ ಬಸವೇಶ್ವರ ಸಂಸ್ಥಾನಮಠದ ಬೂದಿ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಸಂಸದ ರಾಜಾ ಅಮರೇಶ್ವರ ನಾಯಕ , ಶಾಸಕರಾದ ಡಾ. ಶಿವರಾಜ್ ಪಾಟೀಲ್,ಬಸನಗೌಡ ದದ್ದಲ್, ವಿಧಾನ ಪರಿಷತ್ ಮಾಜಿ ಸದಸ್ಯ ಎನ್. ಎಸ್ .ಬೋಸರಾಜ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಕೆ ಒ ಎಫ್ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಆತ್ತನೂರು ಭಾಗವಹಿಸಲಿದ್ದಾರೆ ಎಂದರು. ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿರಾಗಿ ಕಲಬುರಗಿ ಸಂಗೀತ ವಿಶ್ವವಿದ್ಯಾಲಯ ಕುಲಪತಿ ಡಾ.ರಾಜಾ ಹನುಮಣ್ಣ ನಾಯಕ ದೊರೆ, ದೆಹಲಿ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ.ಅವಿನಾಶ್ ಕುಮಾರ್ ಆಗಮಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸೂಗೂರಯ್ಯ ಸ್ವಾಮಿ ಹೊಸೂರು,ಇಬ್ರಾಹಿಂ,ವೆಂಕಟೇಶ್ ಅಲ್ಕೊಡ್ ಇದ್ದರು.