ಜು. ೩ ರವರೆಗೆ ಕವಿತಾಗೆ ನ್ಯಾಯಾಂಗ ಬಂಧನ

ನವದೆಹಲಿ,ಜೂ.೩- ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಜುಲೈ ೩ರವರೆಗೆ ವಿಸ್ತರಿಸಿ ಆದೇಶಿಸಿದೆ.
ಕವಿತಾ ವಿರುದ್ಧ ಪ್ರೊಡಕ್ಷನ್ ವಾರಂಟ್ ಹೊರಡಿಸಿದ ಒಂದು ದಿನದ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕಸ್ಟಡಿ ಅವಧಿತನ್ನು ಇನ್ನೂ ಒಂದು ತಿಂಗಳು ವಿಸ್ತರಿಸಿ ಆದೇಶಿಸಿದ್ದಾರೆ.
ಮೇ ೨೯ ರಂದು ಪ್ರಕರಣದಲ್ಲಿ ಬಿಆರ್‌ಎಸ್ ನಾಯಕನ ವಿರುದ್ಧದ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ನಂತರ ನ್ಯಾಯಾಲಯವು ವಾರಂಟ್‌ಗಳನ್ನು ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕವಿತಾ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿತ್ತು.
ಮೂವರಿಗೆ ಜಾಮೀನು:
ಮದ್ಯ ನೀತಿ ಪ್ರಕರಣಕ್ಕೆ ಬಂಧಿತರಾಗಿರುವ
ಆರೋಪಿಗಳಾದ ಪ್ರಿನ್ಸ್, ದಾಮೋದರ್ ಮತ್ತು ಅರವಿಂದ್ ಸಿಂಗ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಜಾರಿ ನಿರ್ದೇಶನಾಲದ ತನಿಖೆಯ ಸಮಯದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು..ಆಪಾದಿತ ಹಗರಣದಲ್ಲಿ ಇಡಿ ಮತ್ತು ಸಿಬಿಐ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ.
೨೦೨೧-೨೨ರ ದೆಹಲಿ ಸರ್ಕಾರದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಗಿತ್ತು
ಮಾರ್ಚ್ ೧೫ ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಜಾರಿ ನಿರ್ದೇಶನಾಲಯ ಕವಿತಾ ಅವರನ್ನು ಬಂಧಿಸಿತು. ಬಳಿಕ ಸಿಬಿಐ ವಿಚಾರಣೆ ನಡೆಸಿ ನಂತರ ಕವಿತಾ ಅವರನ್ನು ಜೈಲಿನಲ್ಲಿಯೇ ಬಂಧಿಸಿ ಮತ್ತೊಂದು ಪ್ರಕರಣದ ವಿಚಾರಣೆ ನಡೆಸಿತ್ತು. ಈ ಪ್ರಕರದಲ್ಲಿ ಒಂದು ತಿಂಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.