ಜು.೬: ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ

ರಾಯಚೂರು,ಜೂ.೨೦-
ಜೂ.೧೯ರಿಂದ ಜು.೦೬ರವರೆಗೆ ಕುಷ್ಟ ರೋಗ ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶಗಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕರಿಂದ ಸರ್ವೆ ಕಾರ್ಯ ಕೈಗೊಂಡು ಕುಷ್ಟರೋಗ ಪ್ರಕರಣಗಳು ಪತ್ತೆಯಾದಲ್ಲಿ ಅಂತಹ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಅವರು ಹೇಳಿದರು.
ನಗರದ ಜಹಿರಾಬಾದ್ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕುಷ್ಟರೋಗ ಪತ್ತೆಹಚ್ಚುವ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಡಗಿ ಕುಳಿತ ಕುಷ್ಠ ರೋಗದ ಪ್ರಕರಣಗಳನ್ನು ಕಂಡು ಹಿಡಿಯುವುದು ಚರ್ಮದ ಮೇಲೆ ಬಣ್ಣ ಬದಲಾಗಿ ತಿಳಿ ಬಿಳಿ ತಾಮ್ರ ಬಣ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳನ್ನು ಕಂಡುಹಿಡುವುದು ಮತ್ತು ಶೀರ್ಘವಾಗಿ ಪತ್ತೆ ಹಚ್ಚುವುದು ಹಾಗೂ ಸಂಪೂರ್ಣ ಚಿಕಿತ್ಸೆಯನ್ನು ನೀಡಲು ತಿಳಿಸಿದರು. ಈ ಚಿಕಿತ್ಸೆಯನ್ನು ಆರೋಗ್ಯ ಇಲಾಖೆಯಿಂದ ಉಚಿತವಾಗಿ ನೀಡಲಾಗುವುದೆಂದರು.
ಜಿಲ್ಲೆಯಲ್ಲಿ ಒಟ್ಟು ೧೨೯ ಕುಷ್ಟ ರೋಗ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ೨೬ ಪಿಬಿ ಮತ್ತು ೧೦೩ ಎಮ್‌ಬಿ ಪ್ರಕರಣಗಳು ಇರುತ್ತವೆ. ಈ ಎಲ್ಲಾ ಪ್ರಕರಣಗಳು ಚಿಕಿತ್ಸೆ ಪಡೆದು ಗುಣಮುಖರಾಗಿರುತ್ತಾರೆ. ಕುಷ್ಠ ರೋಗ ಪ್ರಕರಣ ಪತ್ತೆ ಹಚ್ಚುವ ಅಂದೋಲನದ ಮೂಲ ಉದ್ದೇಶ ಸರ್ವೇ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಶಂಕಿತ ಪ್ರಕರಣಗಳನ್ನು ಕಂಡುಹಿಡಿಯುವುದಾಗಿದೆ. ಮತ್ತು ೨೦೩೦ ರವರೆಗೆ ಕುಷ್ಟಮುಕ್ತ ಭಾರತವನ್ನು ನಿರ್ಮಿಸಿ ಶೂನ್ಯ ಪ್ರಕರಣಕ್ಕೆ ತರುವುದಾಗಿರುತ್ತದೆ.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಯಶೋದಾ ಎನ್, ತಾಲೂಕ ಆರೋಗ್ಯ ಅಧಿಕಾರಿ ಡಾ.ಎಮ್.ಡಿ ಶಾಕೀರ್, ವೈದ್ಯಾಧಿಕಾರಿಗಳಾದ ಡಾ.ಕಾವ್ಯ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.