ಜು.15 ರಂದು ಪ್ರಗತಿ ಪರಿಶೀಲನಾ ಸಭೆ

ಗದಗ, ಜು 13: ಗಣಿ ಮತ್ತು ಭೂ ವಿಜ್ಞಾನ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ ಹಾಲಪ್ಪ ಬಸಪ್ಪ ಅವರು ಜುಲೈ 15 ರಂದು ಗದಗ ಜಿಲ್ಲೆಗೆ ಆಗಮಿಸಿ ಸಂಜೆ 5 ರಿಂದ 7.30 ರವರೆಗೆ ಗಣಿ ಮತ್ತು ಭೂ ವಿಜ್ಞಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ , ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8.30 ಗಂಟೆಗೆ ಗದಗಿನಿಂದ ಕೊಪ್ಪಳಕ್ಕೆ ಪ್ರಯಾಣ ಮಾಡುವರು.