ಜು. 17 ರಂದು “ಸಕ್ರಿಯ ಕ್ಷಯರೋಗಪತ್ತೆ ಆಂದೋಲನ ಕಾರ್ಯಕ್ರಮ” ಉದ್ಘಾಟನೆ

ಕಲಬುರಗಿ,ಜು.15:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ “ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮದ” ಉದ್ಘಾಟನಾ ಸಮಾರಂಭವು ಇದೇ ಜುಲೈ 17 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಜಗತ್ ಸರ್ಕಲ್ ಹತ್ತಿರದ ಸೇಂಟ್ ಜಾನ್ಸ್ ಆಸ್ಪತ್ರೆ ಸಭಾಂಗಣದಲ್ಲಿ ಜರುಗಲಿದೆ.

ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ವಿಭಾಗದ ಜಂಟಿ ನಿರ್ದೇಶಕರ ಕಾರ್ಯಾಲಯದ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ ಮಾಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪನಿರ್ದೇಶಕ ಶರಣಬಸಪ್ಪ ಗಣಜಲಖೇಡ, ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕರಾದ ಡಾ. ಅಂಬಾರಾಯ ರುದ್ರವಾಡಿ, ಕಲಬುರಗಿ ತಾಲೂಕು ಆರೋಗ್ಯ ಅಧಿಕಾರಿ ಮಾರುತಿರಾವ್ ಕಾಂಬಳೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಚಂದ್ರಕಾಂತ ನರಬೋಳಿ ಅವರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳುವರು.