
ಸೊರಬ.ಜು.ರೈತ ಹೋರಾಟಗಾರ ಹಚ್.ಎಸ್.ರುದ್ರಪ್ಪನವರ ಕಾರ್ಯಕ್ರಮವನ್ನು ಜು. 19 ರಂದು ಶಿವಮೊಗ್ಗ ಮತ್ತೂರು ರಸ್ತೆಯ ತೀರ್ಥಪ್ಪ ಕ್ಯಾಂಪ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಉಮೇಶ್ ಪಾಟೀಲ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರೈತರ ಪರವಾಗಿ ಹೋರಾಟದ ಮೂಲಕ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸಿದ ಮಹಾನ್ ನಾಯಕ ಹೆಚ್.ಎಸ್.ರುದ್ರಪ್ಪನವರ ನುಡಿ ನಮನ ಕಾರ್ಯಕ್ರಮವು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾಣೆ ಹಳ್ಳಿ ಇವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದೆ ಹಾಗೂ 19ರ ಬೆಳಗ್ಗೆ 10.30,ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಹೊರಡಿಸಲಾಗುವುದು ಈ ಕಾರ್ಯಕ್ರಮಕ್ಕೆ ಎಲ್ಲಾ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಜಿಲ್ಲಾದ್ಯಕ್ಷ ಸೈಯದ್ ಶಪಿಉಲ್ಲಾ, ಜಿಲ್ಲಾ ಉಪಾಧ್ಯಕ್ಷ ಮಂಜುನಾಥ್ ಆರೆಕೊಪ್ಪ, ತಾಲೂಕು ಉಪಾಧ್ಯಕ್ಷ ನಾಗರಾಜ್ ಬೆಣ್ಣಿಗೇರಿ, ಪ್ರಧಾನ ಕಾರ್ಯದರ್ಶಿ ಮೇಘರಾಜ್, ಹನುಮಂತಪ್ಪ ಭಾವಿಕಟ್ಟಿ,ಲೋಕಪ್ಪ ಮರೂರು.ಪಕ್ಕೀರಸ್ವಾಮಿ ಸೇರಿದಂತೆ ಮೊದಲಾದವರಿದ್ದರು.