ಜು. 2 ರಂದು ಡಾ. ಫ.ಗು. ಹಳಕಟ್ಟಿಯವರ ಜಯಂತಿ ಆಚರಣೆ

ಕಲಬುರಗಿ,ಜೂ.30:ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯವರ (ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ) ಜಯಂತಿ ಆಚರಣೆ ಕಾರ್ಯಕ್ರಮವನ್ನು ಜುಲೈ 2 ರಂದು ರವಿವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ವಹಿಸುವರು. ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ (ದಕ್ಷಿಣ) ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ, ವಿಧಾನಸಭೆ ಶಾಸಕರುಗಳಾದ ಬಿ.ಆರ್.ಪಾಟೀಲ, ಎಂ.ವೈ. ಪಾಟೀಲ, ಡಾ. ಅಜಯಸಿಂಗ್, ಖನೀಜ್ ಫಾತೀಮಾ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ತಿಪ್ಪಣ್ಣಪ್ಪ ಕಮಕನೂರ, ಮಹಾನಗರಪಾಲಿಕೆ ಮಹಾಪೌರ ವಿಶಾಲ ಆರ್. ಧರ್ಗಿ ಹಾಗೂ ಡಾ. ಘ.ಗು. ಹಳಕಟ್ಟಿಯವರ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಸೂರ್ಯಕಾಂತ ಸೊನ್ನದ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಕಲಬುರಗಿ ಲೇಖಕ ಡಾ. ಶಿವರಂಜನ ಸತ್ಯಂಪೇಟ್ ಅವರು ವಿಶೇಷ ಉಪನ್ಯಾಸ ನೀಡುವರು.