ಜು. 2 ರಂದು ಫ.ಗು. ಹಳಕಟ್ಟಿಯವರ ಜಯಂತಿ

ಕಲಬುರಗಿ: ಜೂ.23: ಜಿಲ್ಲಾಡಳಿತ ವತಿಯಿಂದ ಇದೇ ಜುಲೈ 2 ರಂದು ಬೆಳಿಗ್ಗೆ 12 ಗಂಟೆಗೆ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಅಧಿಕಾರಿಗಳು ತಮಗೆ ನೀಡಿದ ಕೆಲಸಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಚುನಾವಣೆಯ ಶಾಖೆಯ ತಹಶೀಲ್ದಾರ ಪಂಪಯ್ಯ ಜಿಲ್ಲಾಧಿಕಾರಿಗಳ ಅವರು ಅಧಿಕಾರಿಗಳಿಗೆ ಸೂಚಿಸಿದರು. ವೇದಿಕೆ ಒಬ್ಬ ಸಮಿತಿ ಅಧ್ಯಕ್ಷರನ್ನು ಹಾಗೂ ಉಪನ್ಯಾಸಕರನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ರಂಗಾಯಾಣ ಉಪನಿರ್ದೇಶಕಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಜಗದೀಶ್ವರಿ ಶಿವಕೇರಿ ಮಾತನಾಡಿ ಸಂಗೀತ ಕಾರ್ಯಕ್ರಮಗಳು ಜರಗಲಿವೆ ವೇದಿಕೆ ಅಲಂಕಾರ ಮಾಡಲಾಗುವುದು ಆಮಂತ್ರಣ ಪತ್ರಗಳು ಮುದ್ರಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಅಂದು ನಡೆಯುವ ಜಯಂತಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಸರಕಾರಿ ಅರೆ ಸರಕಾರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬೆಳಿಗ್ಗೆ 9 ಗಂಟೆಗೆ ಆಚರಿಸಬೇಕೆಂದರು.
ಕುಡಿಯುವ ನೀರು, ಸ್ವಚ್ಪತೆ ಕಾಪಾಡಿಕೊಂಡು ಹೋಗಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹಟಗಾರ ಸಮಾಜದ ಅಧ್ಯಕ್ಷರಾದ ಶಿವಲಿಂಗ ಅಷ್ಟಗಿ, ಗೌರವಧ್ಯಕ್ಷರು ಸೂರ್ಯಕಾಂತ ಸೋನ್ನದ, ಕಾರ್ಯದರ್ಶಿ ವಿನೋದ್ ಕುಮಾರ, ಕಸಪ ಗೌರವ ಕಾಯದರ್ಶಿ ಶಿವರಾಜ ಅಂಡಗಿ,ಉಪಸ್ಥಿತರಿದರು.