ಜು. 25 ರಂದು ಸಹಕಾರ ಸಚಿವರಿಂದ ಸಂವಾದ

ಕಲಬುರಗಿ:ಜು.24:ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರು ಕಲಬುರಗಿಗೆ ಭೇಟಿ ನೀಡಿ ಇದೇ ಜುಲೈ 25 ಹಾಗೂ 26 ರಂದು ಕಲಬುರಗಿಯಲ್ಲಿ ಸಹಕಾರ ಇಲಾಖೆಯ ಕಲಬುರಗಿ ಪ್ರಾಂತೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ರಾಯಚೂರ ಕಲಬುರಗಿ ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವರು ಜುಲೈ 25 ರಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯ ಶಾಸಕರು, ಸಂಸದರು ಹಾಗೂ ಹಿರಿಯ ಸಹಕಾರಿಗಳೊಂದಿಗೆ ಈ ಪ್ರಾಂತದ ಸಹಕಾರ ಚಳುವಳಿಯ ಸಮಗ್ರ ಅಭಿವೃದ್ಧಿ ಕುರಿತು ಸಂವಾದ ನಡೆಸಲಿದ್ದಾರೆ. ಇದರಿಂದ ಈ ಭಾಗದ ಸಹಕಾರ ಚಳುವಳಿಯ ಬೆಳವಣಿಗೆ ಬೆಳಕು ಚೆಲ್ಲಲ್ಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.