ಜು.27 ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅತ್ಯುತ್ತಮ ಪ್ರಶಸ್ತಿ ಪ್ರದಾನ – ನರಸಿಂಹಲು

ರಾಯಚೂರು,ಜು.25- ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಮಾಜ ಸೇವಾ ಸಂಸ್ಥೆ ವತಿಯಿಂದ  ಜುಲೈ 27 ರಂದು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಮಾಜ ಸೇವಾ ಸಂಸ್ಥೆಯ 11ನೇ ವಾರ್ಷಿಕೋತ್ಸವ ಹಾಗು 6ನೇ ವರ್ಷದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅತ್ಯುತ್ತಮ ಪ್ರಶಸ್ತಿ ಪ್ರದಾನ ಹಾಗೂ ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ನರಸಿಂಹಲು ಹೇಳಿದರು.

ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ನಗರದ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.2022 ನೇ ಸಾಲಿನ ಕಲಾಂ ಪ್ರಶಸ್ತಿಯನ್ನು 13 ಜನರಿಗೆ ನೀಡಲಾಗುವುದು ಹಾಗೂ 2 ಉತ್ತಮ ಪರಿಸರ ಶಾಲೆಗಳನ್ನು ಗುರುತಿಸಲಾಗಿದೆ ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ಕಿಲ್ಲೇ ಬೃಹನ್ಮ ಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು, ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗಿನಿ ಬಿ.ಕೆ ಸ್ಮಿತಾ ಅಕ್ಕ ಅವರು ವಹಿಸಲಿದ್ದಾರೆ.ಕಾರ್ಯಕ್ರಮ ಉದ್ಘಾಟನೆಯನ್ನು ಶಾಸಕ ಶಿವರಾಜ ಪಾಟೀಲ್ ಅವರು ಮಾಡಲಿದ್ದಾರೆ.ಮುಖ್ಯ ಅಥಿತಿಗಳಾಗಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್,ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್,ರವಿ ಪಾಟೀಲ್, ಎ.ಪಿ.ಎಂ.ಸಿ ಅಧ್ಯಕ್ಷ ಅಚ್ಚುತರೆಡ್ಡಿ,ಜೆಡಿಎಸ್ ಮುಖಂಡ ರಾಮನಗೌಡ ಏಗನೂರು,ವಿಜಯ ನಿಶಾಂತ್, ಸಾಯಿಕರಣ್ ಆದೋನಿ ಅವರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಧ್ಯಕ್ಷ ವಿಶ್ವನಾಥ ರೆಡ್ಡಿ, ನರಸಪ್ಪ ಬಿಚ್ಚಾಲಿ,ಮನ್ಸೂರ್,ಪ್ರಾಣೇಶ್ ಪಕ್ಕಂದೊಡ್ಡಿ ಇದ್ದರು.