ಜು. 28 ರಂದು ವಾರ್ಡ್ ಸಮಿತಿ ರಚನೆ ಹಾಗೂ ಇದರಪ್ರಯೋಜನೆ ಕುರಿತು ಅರಿವು ಹಾಗೂ ಸಂವಾದ

ಕಲಬುರಗಿ,ಜು.26:ಕಲಬುರಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ರಚನೆ ಹಾಗೂ ಇದರ ಪ್ರಯೋಜನೆಗಳ ಕುರಿತು ಕಲಬುರಗಿ ಮಹಾನಗರಪಾಲಿಕೆ ಆಯುಕ್ತರು ಇದೇ ಜುಲೈ 28 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಮಹಾನಗರ ಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಮಹಾನಗರಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು. ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 55 ವಾರ್ಡ್‍ಗಳಲ್ಲಿ ತಲಾ ಒಂದು ವಾರ್ಡ್‍ಗೆ ಒಂದು ವಾರ್ಡ್ ಸಮಿತಿಯನ್ನು ರಚಿಸಲು ಸರ್ಕಾರದ ನಿರ್ದೇಶನದ ಮೇರೆಗೆ ಆಸಕ್ತಿಯುಳ್ಳ ಸಾರ್ವಜನಿಕರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಅವರು ತಿಳಿಸಿದ್ದಾರೆ.