
ಬೀದರ್;ಜು.2: ಈ ತಿಂಗಳ 5ರಂದು ಬೀದರ್ ನಗರದ ಬ್ರಹ್ಮಾಕುಮಾರಿಸ್ ರಾಜಯೋಗ ಕೇಂದ್ರ ಪಾವನಧಾಮ ಅವರಣದಲ್ಲಿ ಬ್ರಹ್ಮಾಕುಮಾರಿಸ್ ರಾಜಯೋಗ ಕೇಂದ್ರ ಪಾವನಧಾಮ ಹಾಗೂ ಡಾ.ಎಸ್.ಎಸ್ ಸಿದ್ದಾರೆಡ್ಡಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಸ್.ಎಸ್ ಸಿದ್ದಾರೆಡ್ಡಿ ಫೌಂಡೇಶನ್ ಗೌರವಾಧ್ಯಕ್ಷೆ ಡಾ.ಗುರಮ್ಮ ಸಿದ್ದಾರೆಡ್ಡಿ ಹೇಳಿದರು.
ಶನಿವಾರ ಪತ್ರಿಕಾ ಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಜುಲೈ 5ರಂದು ಬೆಳಿಗ್ಗೆ 10.30 ಗಂಟೆಗೆ ಜರುಗುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ರಾಜಸ್ಥಾನ ಮೌಂಟ್ ಅಬುದ ಖ್ಯಾತ ಕ್ಯಾನ್ಸರ್ ರೋಗ ತಜ್ಞರಾದ ಡಾ. ಡಾ.ಪ್ರೇಮಮಸಂತ ಭಾಯಿ ಉದ್ಘಾಟಿಸಲಿರುವ ಕಾರ್ಯಕ್ರಮದ ಸಾನಿಧ್ಯವನ್ನು ರಾಜಯೋಗ ಕೇಂದ್ರ ಪಾವನಧಾಮದ ಸಂಚಾಲಕಿ ಬಿ.ಕೆ ಪ್ರತಿಮಾ ಬಹೆನ್‍ಜಿ ವಹಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ತಾನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ ಠಾಕೂರ್, ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಸುರೇಶ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಡಿ.ಕೆ ಗಣಪತಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡುವರು.
ಈ ಸಂದರ್ಭದಲ್ಲಿ ಡಾ.ಎಸ್.ಎಸ್ ಸಿದ್ದಾರೆಡ್ಡಿ ಫೌಂಡೇಶನ್ ವತಿಯಿಂದ 70 ಪ್ರತಿಶತಕ್ಕಿಂತ ಹೆಚ್ಚು ಅಂಕ ಗಳಿಸಿದ ಐದು ಜನ ಪತ್ರಕರ್ತರ ಮಕ್ಕಳಿಗೆ ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ. ಜೊತೆಗೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಎಲ್ಲ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಜರುಗುವುದೆಂದು ಡಾ.ಗುರಮ್ಮ ಸಿದ್ದಾರೆಡ್ಡಿ ಹೇಳಿದರು.
ಬ್ರಹ್ಮಾಕುಮಾರಿಸ್ ಕೇಂದ್ರ ಪಾವನಧಾಮದ ಸಂಚಾಲಕಿ ಬಿ.ಕೆ ಪ್ರತಿಮಾ ಬಹೆನ್‍ಜಿ ಅವರು ಡಾ.ಪ್ರೇಮಮಸಂತ ಭಾಯಿ ಅವರ ಕಾರ್ಯಕ್ರಮಗಳ ಸಂಪೂರ್ಣ ವಿವರ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಡಿ.ಕೆ ಗಣಪತಿ ಹಾಗೂ ಕೇಂದ್ರದ ಹಿರಿಯ ರಾಜಯೋಗ ಶಿಕ್ಷಕಿ ಬಿ.ಕೆ ಗುರುದೇವಿ ಅಕ್ಕನವರು ಉಪಸ್ಥಿತರಿದ್ದರು.