ಜೂನ್ ನಲ್ಲಿ 10 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಕೆ: ಸೆರಂ

ಮುಂಬೈ,ಮೇ.30- ಜೂನ್ ತಿಂಗಳಲ್ಲಿ ಸರಿಸುಮಾರು 10 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರ ಸರ್ಕಾರಕ್ಕೆ ಪೂರೈಕೆ ಮಾಡುವುದಾಗಿ ಭಾರತೀಯ ಸೆರಂ ಸಂಸ್ಥೆ ಹೇಳಿದೆ

ಸದ್ಯ ಏಳುಕೋಟಿ ಪ್ರತಿ ತಿಂಗಳು ಕೋವಿಶೀಲ್ಡ್ ಡೋಸ್ ಲಸಿಕೆ ಉತ್ಪಾದನೆ ಮಾಡುತ್ತಿದ್ದು ಮುಂದಿನ ತಿಂಗಳು ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲಾ ಹೇಳಿದ್ದಾರೆ.

ಆಗಸ್ಟ್ ತಿಂಗಳ ವೇಳೆಗೆ ಉತ್ಪಾದನಾ ಪ್ರಮಾಣವನ್ನು ಮತ್ತಷ್ಟು ಗಣನೀಯವಾಗಿ ಹೆಚ್ಚಳಮಾಡುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಎಲ್ಲಾ ತಯಾರಿಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ

ದೇಶದಲ್ಲಿ ಹೆಚ್ಚುತ್ತಿರುವ ಲಸಿಕೆ ಬೇಡಿಕೆಯ ಹಿನ್ನೆಲೆಯಲ್ಲಿ ಉತ್ಪಾದನೆಯ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡಲು ಉದ್ದೇಶಿಸಲಾಗಿದೆ ಹೀಗಾಗಿ ಮುಂದಿನ ತಿಂಗಳು ರಾಜ್ಯಗಳು ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸರ್ಕಾರಕ್ಕೆ 10 ಕೋಟಿ ಡೋಸ್ ಲಸಿಕೆ ಪೂರೈಕೆ ಮಾಡಲಾಗುವುದು ಈ ನಿಟ್ಟಿನಲ್ಲಿ ಕಾರ್ಯನಿರತರಾಗಿರುವದಾಗಿ ಅವರು ಹೇಳಿದ್ದಾರೆ.

ಕೇಂದ್ರಕ್ಕೆ ಪತ್ರ:

ಜೂನ್ ತಿಂಗಳಲ್ಲಿ ಭಾರತೀಯ ಸೆರಂ ಸಂಸ್ಥೆಯಿಂದ 10‌ಕೋಟಿ ಡೋಸ್ ಪೂರೈಕೆ ಮಾಡಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಸಂಸ್ಥೆಯ ಹಿರಿಯ ಅಧಿಕಾರಿ ಪ್ರಕಾಶ್ ಕುಮಾರ್ ಸಿಂಗ್ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಬರೆದಿರುವ ಪತ್ರದಲ್ಲಿ ವಿಷಯ ತಿಳಿಸಿದ್ದಾರೆ.

ಸದ್ಯ ಪುಣೆಯ ಔಷಧ ತಯಾರಿಕಾ ಘಟಕದಲ್ಲಿ ಪ್ರತಿ ತಿಂಗಳು 7 ಕೋಟಿ ದೋಸ್ತ್ ಲಸಿಕೆ ಉತ್ಪಾದನೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳ ಮಾಡಲಾಗುವುದು ಎಂದು ಅವರು ತಿಳಿಸಿದರು